ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.