1 ಅರಸುಗಳು 18:25 - ಪರಿಶುದ್ದ ಬೈಬಲ್25 ನಂತರ ಎಲೀಯನು ಬಾಳನ ಪ್ರವಾದಿಗಳಿಗೆ, “ನಿಮ್ಮಲ್ಲಿ ಬಹು ಜನರು ಇರುವುದರಿಂದ ಮೊದಲು ನೀವೇ ಹೋಗಿ ನಿಮ್ಮ ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ. ನಿಮ್ಮ ದೇವರಿಗೆ ಪ್ರಾರ್ಥಿಸಿ. ಆದರೆ ನೀವು ಬೆಂಕಿಯನ್ನು ಹೊತ್ತಿಸಬೇಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚುಮಂದಿ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು, ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಅವನು ಬಾಳನ ಪ್ರವಾದಿಗಳಿಗೆ - ನೀವು ಹೆಚ್ಚು ಮಂದಿ ಇರುವದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಅನೇಕರಾಗಿರುವುದರಿಂದ ಒಂದು ಹೋರಿಯನ್ನು ಆಯ್ದುಕೊಂಡು, ಅದನ್ನು ಮೊದಲು ಸಿದ್ಧಮಾಡಿ, ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ. ಆದರೆ ಬೆಂಕಿಯನ್ನು ಹೊತ್ತಿಸಬೇಡಿರಿ,” ಎಂದನು. ಅಧ್ಯಾಯವನ್ನು ನೋಡಿ |
ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.