Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:26 - ಪರಿಶುದ್ದ ಬೈಬಲ್‌

26 ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:26
21 ತಿಳಿವುಗಳ ಹೋಲಿಕೆ  

ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”


ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


“ನೀವು ಪ್ರಾರ್ಥಿಸುವಾಗ ದೇವರನ್ನು ತಿಳಿದಿಲ್ಲದ ಜನರಂತೆ ಪ್ರಾರ್ಥಿಸಬೇಡಿ. ಅವರು ಅರ್ಥವಿಲ್ಲದ ಸಂಗತಿಗಳನ್ನು ಹೇಳುತ್ತಲೇ ಇರುತ್ತಾರೆ. ಆ ರೀತಿ ಪ್ರಾರ್ಥಿಸಬೇಡಿ. ತಾವು ಅನೇಕ ವಿಷಯಗಳನ್ನು ಹೇಳುವುದರಿಂದ ದೇವರು ತಮ್ಮ ಪ್ರಾರ್ಥನೆಯನ್ನು ಕೇಳುತ್ತಾನೆಂಬುದು ಅವರ ಆಲೋಚನೆ.


ಆ ಸಮಯದಲ್ಲಿ ಹೊಸ್ತಿಲನ್ನು ಹಾರಿ ತಮ್ಮ ಒಡೆಯರ ಮನೆಯನ್ನು ತಮ್ಮ ಸುಳ್ಳು, ಮೋಸ, ಹಿಂಸೆಗಳಿಂದ ತುಂಬಿರುವವರನ್ನು ಶಿಕ್ಷಿಸುತ್ತೇನೆ” ಎಂದು ಯೆಹೋವನು ನುಡಿಯುತ್ತಾನೆ.


ಆ ಮನುಷ್ಯನ ಸುಳ್ಳು ದೇವರು ಅವನಿಗೆ ಸಹಾಯ ಮಾಡಲಾರದು. ಯಾಕೆಂದರೆ ಅದು ಒಬ್ಬನು ಲೋಹದಿಂದ ಮಾಡಿದ ಕೇವಲ ವಿಗ್ರಹವಷ್ಟೆ. ಅದು ಕೇವಲ ಜಡಮೂರ್ತಿ. ಅದನ್ನು ಮಾಡಿದವನು, ಅದು ಅವನಿಗೆ ಸಹಾಯ ಮಾಡುವದೆಂದು ಯೋಚಿಸುವದು ಶುದ್ಧ ಮೂರ್ಖತನ. ಆ ಮೂರ್ತಿಯು ಮಾತಾಡುವೂದೂ ಇಲ್ಲ.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ.


ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.


ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು” ಎಂದು ಹೇಳಿದನು. ಜನರೆಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು.


ನಂತರ ಎಲೀಯನು ಬಾಳನ ಪ್ರವಾದಿಗಳಿಗೆ, “ನಿಮ್ಮಲ್ಲಿ ಬಹು ಜನರು ಇರುವುದರಿಂದ ಮೊದಲು ನೀವೇ ಹೋಗಿ ನಿಮ್ಮ ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ. ನಿಮ್ಮ ದೇವರಿಗೆ ಪ್ರಾರ್ಥಿಸಿ. ಆದರೆ ನೀವು ಬೆಂಕಿಯನ್ನು ಹೊತ್ತಿಸಬೇಡಿ” ಎಂದು ಹೇಳಿದನು.


ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.


ಹಡಗು ಮುಳುಗಿಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯಪಟ್ಟಿದ್ದರು. ಪ್ರತಿಯೊಬ್ಬರು ತಮ್ಮತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿದ್ರೆ ಮಾಡತೊಡಗಿದನು.


ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.


ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿಹೋಯಿತು.


ಅಷ್ಡೋದಿನ ಜನರು ಮಾರನೆಯ ದಿನ ಬೆಳಿಗ್ಗೆ ಎದ್ದಾಗ, ದಾಗೋನನ ವಿಗ್ರಹವು ಯೆಹೋವನ ಪೆಟ್ಟಿಗೆಯ ಮುಂದೆ ಬೋರಲಾಗಿ ಬಿದ್ದಿತ್ತು. ಅಷ್ಡೋದಿನ ಜನರು ದಾಗೋನ್ ವಿಗ್ರಹವನ್ನು ಅದರ ಸ್ಥಳದಲ್ಲಿ ಮತ್ತೆ ನಿಲ್ಲಿಸಿದರು.


ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು