1 ಅರಸುಗಳು 18:27 - ಪರಿಶುದ್ದ ಬೈಬಲ್27 ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು. ಅಧ್ಯಾಯವನ್ನು ನೋಡಿ |
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.