1 ಅರಸುಗಳು 18:29 - ಪರಿಶುದ್ದ ಬೈಬಲ್29 ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |
ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.
ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.