1 ಅರಸುಗಳು 18:3 - ಪರಿಶುದ್ದ ಬೈಬಲ್3 ರಾಜನಾದ ಅಹಾಬನು ಓಬದ್ಯನನ್ನು ತನ್ನ ಬಳಿಗೆ ಕರೆಯಿಸಿದನು. ಓಬದ್ಯನು ರಾಜನ ಅರಮನೆಯ ಮೇಲ್ವಿಚಾರಕನಾಗಿದ್ದನು. (ಓಬದ್ಯನು ಯೆಹೋವನ ನಿಜವಾದ ಹಿಂಬಾಲಕರಲ್ಲಿ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೇಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿ |
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.