Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

1 ಅರಸುಗಳು 18:30 - ಪರಿಶುದ್ದ ಬೈಬಲ್‌

30 ಆಗ ಎಲೀಯನು ಜನರೆಲ್ಲರಿಗೂ, “ಈಗ ನನ್ನ ಬಳಿಗೆ ಬನ್ನಿ” ಎಂದನು. ಅವನ ಸುತ್ತಲೂ ಜನರೆಲ್ಲರೂ ಒಟ್ಟುಗೂಡಿದರು. ಯೆಹೋವನ ಯಜ್ಞವೇದಿಕೆಯು ಒಡೆದುಹೋಗಿತ್ತು. ಎಲೀಯನು ಅದನ್ನು ಸರಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅನಂತರ ಎಲೀಯನು ಜನರೆಲ್ಲರನ್ನು ಹತ್ತಿರಕ್ಕೆ ಕರೆದನು; ಅವರು ಬಂದರು. ಹಾಳಾಗಿದ್ದ ಅಲ್ಲಿನ ಸರ್ವೇಶ್ವರನ ಪೀಠವನ್ನು ದುರಸ್ತು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿನ ಯೆಹೋವವೇದಿಯನ್ನು ತಿರಿಗಿ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಎಲೀಯನು ಸಮಸ್ತ ಜನರಿಗೂ, “ನನ್ನ ಬಳಿಗೆ ಬನ್ನಿರಿ,” ಎಂದನು. ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತು ಹಾಕಿದ ಯೆಹೋವ ದೇವರ ಬಲಿಪೀಠವನ್ನು ಅವನು ದುರಸ್ತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

1 ಅರಸುಗಳು 18:30
4 ತಿಳಿವುಗಳ ಹೋಲಿಕೆ  

ಯೆಹೋವನ ಯಜ್ಞವೇದಿಕೆಯನ್ನು ಕಟ್ಟಿಸಿ ಅದರಲ್ಲಿ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದನು. ಯೆಹೂದದಲ್ಲಿದ್ದ ಎಲ್ಲಾ ಜನರೂ ದೇವರಾದ ಯೆಹೋವನ ಸೇವೆಮಾಡುವಂತೆ ಆಜ್ಞೆ ವಿಧಿಸಿದನು.

ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.

ಎಲೀಯನು, “ಪ್ರಭುವೇ, ಜನರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು; ನಿನ್ನ ಯಜ್ಞವೇದಿಕೆಗಳನ್ನು ನಾಶಮಾಡಿದರು. ಪ್ರವಾದಿಗಳಲ್ಲಿ ನಾನೊಬ್ಬನು ಮಾತ್ರ ಇನ್ನೂ ಬದುಕಿದ್ದೇನೆ. ಈಗ ಜನರು ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ” ಎಂದು ಪ್ರಾರ್ಥಿಸಿದನು.

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು

ಜಾಹೀರಾತುಗಳು