1 ಅರಸುಗಳು 18:32 - ಪರಿಶುದ್ದ ಬೈಬಲ್32 ಎಲೀಯನು ಯೆಹೋವನ ಗೌರವಾರ್ಥವಾಗಿ ಯಜ್ಞವೇದಿಕೆಯನ್ನು ಈ ಕಲ್ಲುಗಳಿಂದ ಸರಿಪಡಿಸಿದನು. ಎಲೀಯನು ಯಜ್ಞವೇದಿಕೆಯ ಸುತ್ತಲೂ ಹಳ್ಳವನ್ನು ತೋಡಿದನು. ಅದು ಹದಿನೈದು ಲೀಟರ್ ನೀರು ತುಂಬುವಷ್ಟು ಅಗಲವಾಗಿತ್ತು ಮತ್ತು ಆಳವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸರ್ವೇಶ್ವರನ ಹೆಸರಿಗಾಗಿ ಒಂದು ಪೀಠವನ್ನು ಕಟ್ಟಿಸಿದನು. ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗಿಸಿ ಕಾಲುವೆ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಯೆಹೋವನ ಹೆಸರಿಗೋಸ್ಕರ ಒಂದು ವೇದಿಯನ್ನು ಕಟ್ಟಿಸಿ ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ ಕಾಲುವೆಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆ ಕಲ್ಲುಗಳಿಂದ ಯೆಹೋವ ದೇವರ ಹೆಸರಿಗೆ ಬಲಿಪೀಠವನ್ನು ಕಟ್ಟಿ, ಆ ಬಲಿಪೀಠದ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ, ಒಂದು ಕಾಲುವೆಯನ್ನು ಮಾಡಿದನು. ಅಧ್ಯಾಯವನ್ನು ನೋಡಿ |