Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:33 - ಪರಿಶುದ್ದ ಬೈಬಲ್‌

33 ನಂತರ ಎಲೀಯನು ಸೌದೆಯನ್ನು ಯಜ್ಞವೇದಿಕೆಯ ಮೇಲೆ ಇಟ್ಟನು. ಅವನು ಹೋರಿಯನ್ನು ತುಂಡುತುಂಡಾಗಿ ಕತ್ತರಿಸಿದನು. ಅವನು ಆ ತುಂಡುಗಳನ್ನು ಸೌದೆಯ ಮೇಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಕಟ್ಟಿಗೆಯನ್ನು ಪೀಠದ ಮೇಲೆ ಪೇರಿಸಿ, ಹೋರಿಯನ್ನು ವಧಿಸಿ ತುಂಡುಮಾಡಿ, ಅದರ ಮೇಲೆ ಇಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಬಲಿಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದಲ್ಲದೆ ಕಟ್ಟಿಗೆಯನ್ನು ವೇದಿಯ ಮೇಲೆ ಕ್ರಮಪಡಿಸಿ ಹೋರಿಯನ್ನು ವಧಿಸಿ ತುಂಡುಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ - ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ತರುವಾಯ ಅವನು ಕಟ್ಟಿಗೆಗಳನ್ನು ಪೀಠದ ಮೇಲೆ ಇಟ್ಟು, ಹೋರಿಯನ್ನು ತುಂಡುತುಂಡಾಗಿ ಕಡಿದು, ಕಟ್ಟಿಗೆಗಳ ಮೇಲೆ ಇಟ್ಟು, “ನೀವು ನಾಲ್ಕು ಕೊಡ ನೀರು ತುಂಬಿಕೊಂಡು ದಹನಬಲಿಯ ಮೇಲೆಯೂ, ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:33
8 ತಿಳಿವುಗಳ ಹೋಲಿಕೆ  

ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.


ದೇವದೂತನು ಗಿದ್ಯೋನನಿಗೆ, “ಆ ಮಾಂಸವನ್ನೂ ಹುಳಿಯಿಲ್ಲದ ಆ ರೊಟ್ಟಿಯನ್ನೂ ಆ ಕಲ್ಲಿನ ಮೇಲೆ ಇಡು. ಆಮೇಲೆ ಆ ನೀರನ್ನು ಅದರ ಮೇಲೆ ಸುರಿ” ಎಂದನು. ದೇವದೂತನು ಹೇಳಿದಂತೆಯೇ ಗಿದ್ಯೋನನು ಮಾಡಿದನು.


ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.


ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಎಲೀಯನು, “ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಆ ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ ಆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು, ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು