1 ಅರಸುಗಳು 18:34 - ಪರಿಶುದ್ದ ಬೈಬಲ್34 ಎಲೀಯನು, “ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಆ ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ ಆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು, ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅವರು ಅಂತೆಯೇ ತೆಗೆದುಕೊಂಡು ಬಂದರು. “ಇನ್ನೊಂದು ಸಾರಿ ತನ್ನಿ,” ಎಂದು ಹೇಳಿದನು. ಅವರು ಇನ್ನೊಮ್ಮೆ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವರು ತೆಗೆದುಕೊಂಡು ಬರಲು ಇನ್ನೊಂದು ಸಾರಿ ತನ್ನಿರಿ ಎಂದು ಹೇಳಿದನು. ತಿರಿಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವರು ಅವನು ಹೇಳಿದಂತೆ ಮಾಡಿದರು. ಆಗ ಎಲೀಯನು, “ಎರಡನೆಯ ಸಾರಿ ಹೊಯ್ಯಿರಿ,” ಎಂದನು. ಅವರು ಎರಡನೆಯ ಸಾರಿಯೂ ಹೊಯ್ದರು. ಮೂರನೆಯ ಸಾರಿ, “ಹೊಯ್ಯಿರಿ,” ಎಂದನು. ಮೂರನೆಯ ಸಾರಿಯೂ ಹೊಯ್ದರು. ಅಧ್ಯಾಯವನ್ನು ನೋಡಿ |
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.