1 ಅರಸುಗಳು 18:37 - ಪರಿಶುದ್ದ ಬೈಬಲ್37 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯೆಹೋವನೇ, ನೀನು ದೇವರೆಂಬುದನ್ನು ಈ ಜನರಿಗೆಲ್ಲ ತೋರಿಸು. ಈ ಜನರನ್ನೆಲ್ಲ ಮತ್ತೆ ನೀನು ನಿನ್ನ ಬಳಿಗೆ ತರುತ್ತಿರುವೆ ಎಂಬುದನ್ನೂ ಈ ಜನರು ತಿಳಿದುಕೊಳ್ಳಲಿ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನಮಗೆ ಕಿವಿಗೊಡಿ; ಸರ್ವೇಶ್ವರಾ ನಮಗೆ ಕಿವಿಗೊಡಿ; ಸರ್ವೇಶ್ವರನಾದ ನೀವೊಬ್ಬರೇ ದೇವರು ಹಾಗು ಈ ಜನರ ಮನಸ್ಸನ್ನು ನಿಮ್ಮಕಡೆಗೆ ತಿರುಗಿಸಿಕೊಳ್ಳುವವರು ಆಗಿರುತ್ತೀರಿ ಎಂಬುದನ್ನು ಇವರಿಗೆ ತಿಳಿಯಪಡಿಸಿ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು. ಅಧ್ಯಾಯವನ್ನು ನೋಡಿ |
ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.
ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.