Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:40 - ಪರಿಶುದ್ದ ಬೈಬಲ್‌

40 ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:40
17 ತಿಳಿವುಗಳ ಹೋಲಿಕೆ  

ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.


“ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು.


ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು.


“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ನಂತರ ಎಲೀಯನು ರಾಜನಾದ ಅಹಾಬನಿಗೆ, “ಈಗ ಹೋಗಿ, ಅನ್ನಪಾನಗಳನ್ನು ತೆಗೆದುಕೋ. ಬಿರುಸಾದ ಮಳೆಯು ಸುರಿಯುವುದು” ಎಂದು ಹೇಳಿದನು.


ರಾಜನಾದ ಅಹಾಬನು ಈಜೆಬೆಲಳಿಗೆ ಎಲೀಯನು ಮಾಡಿದ ಎಲ್ಲಾ ಕಾರ್ಯಗಳನ್ನು ಹೇಳಿದನು. ಎಲೀಯನು (ಬಾಳನ) ಪ್ರವಾದಿಗಳನ್ನೆಲ್ಲ ಖಡ್ಗದಿಂದ ಹೇಗೆ ಕೊಂದನೆಂಬುದನ್ನೂ ಅಹಾಬನು ಅವಳಿಗೆ ಹೇಳಿದನು.


ಆಗ ಜನರೆಲ್ಲರೂ ಸುಳ್ಳುದೇವರಾದ ಬಾಳನ ಗುಡಿಗೆ ಹೋಗಿ ಬಾಳನ ವಿಗ್ರಹವನ್ನೂ ಮತ್ತು ಅವನ ಯಜ್ಞವೇದಿಕೆಯನ್ನೂ ಚೂರುಚೂರು ಮಾಡಿದರು. ಬಾಳನ ಯಾಜಕನಾದ ಮತ್ತಾನನನ್ನು ಜನರು ಯಜ್ಞವೇದಿಕೆಯ ಎದುರಿನಲ್ಲಿಯೇ ಕೊಂದುಹಾಕಿದರು. ಯಾಜಕನಾದ ಯೆಹೋಯಾದಾವನು ಯೆಹೋವನ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.


ಆಗ ಜನರೆಲ್ಲರು ಬಾಳನ ಗುಡಿಯೊಳಗೆ ನುಗ್ಗಿ ಅದನ್ನು ಹಾಳು ಮಾಡಿದರು. ಅದರ ಯಜ್ಞವೇದಿಕೆಗಳನ್ನೂ ವಿಗ್ರಹಗಳನ್ನೂ ಪುಡಿಪುಡಿ ಮಾಡಿದರು. ಬಾಳನ ಅರ್ಚಕನಾದ ಮತ್ತಾನನನ್ನು ಬಾಳನ ವೇದಿಕೆಯ ಮುಂದೆಯೇ ಕೊಂದುಹಾಕಿದರು.


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


ಸೀಸೆರನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನು ಒಟ್ಟುಗೂಡಿಸಿದನು. ಸೀಸೆರನು ತನ್ನ ಎಲ್ಲಾ ಜನರನ್ನು ತನ್ನ ಜೊತೆ ಸೇರಿಸಿಕೊಂಡನು. ಅವರು ಹರೋಷೆತ್ ಹೆಗ್ಗೋಯಿಮ್‌ನಿಂದ ಕೀಷೋನ್ ನದಿಗೆ ನಡೆದರು.


ಅರಮನೆಗೆ ಹೋಗುವ ದಾರಿಯಲ್ಲಿ ಕುದುರೆ ಬಾಗಿಲಿನ ಹತ್ತಿರ ಸಿಪಾಯಿಗಳು ಆಕೆಯನ್ನು ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು