Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:41 - ಪರಿಶುದ್ದ ಬೈಬಲ್‌

41 ನಂತರ ಎಲೀಯನು ರಾಜನಾದ ಅಹಾಬನಿಗೆ, “ಈಗ ಹೋಗಿ, ಅನ್ನಪಾನಗಳನ್ನು ತೆಗೆದುಕೋ. ಬಿರುಸಾದ ಮಳೆಯು ಸುರಿಯುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅನಂತರ ಎಲೀಯನು ಆಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅನಂತರ ಅವನು ಅಹಾಬನಿಗೆ - ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅನಂತರ ಎಲೀಯನು ಅಹಾಬನಿಗೆ, “ನೀನು ಹೋಗಿ ತಿಂದು, ಕುಡಿ. ಏಕೆಂದರೆ ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:41
8 ತಿಳಿವುಗಳ ಹೋಲಿಕೆ  

ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.


ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.


ಆಗ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ಆಲಿಸು; ಅವರ ಪಾಪಗಳನ್ನು ಕ್ಷಮಿಸು; ನೀತಿಮಾರ್ಗವನ್ನು ಅವರಿಗೆ ಕಲಿಸು. ಬಳಿಕ ನೀನು ಅವರಿಗೆ ದಯಪಾಲಿಸಿದ ಭೂಮಿಯ ಮೇಲೆ ಮಳೆಯನ್ನು ಸುರಿಸು.


ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.


ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮೆಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು.


ದೇವರು ಜನರನ್ನು ದಂಡಿಸುವುದಕ್ಕಾಗಲಿ ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು