1 ಅರಸುಗಳು 18:42 - ಪರಿಶುದ್ದ ಬೈಬಲ್42 ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮೆಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ, ಎಲೀಯನು ಕರ್ಮೆಲಿನ ತುದಿಗೆ ಹೋಗಿ, ಅಲ್ಲಿ ನೆಲದ ಮೇಲೆ ಬಿದ್ದುಕೊಂಡು, ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು. ಅಧ್ಯಾಯವನ್ನು ನೋಡಿ |
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.