Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:43 - ಪರಿಶುದ್ದ ಬೈಬಲ್‌

43 ಎಲೀಯನು ತನ್ನ ಸೇವಕನಿಗೆ, “ಸಮುದ್ರದ ಕಡೆಗೆ ನೋಡು” ಎಂದು ಹೇಳಿದನು. ಸಮುದ್ರವು ಕಾಣುವ ಸ್ಥಳಕ್ಕೆ ಆ ಸೇವಕನು ಹೋದನು. ನಂತರ ಸೇವಕನು ಹಿಂದಿರುಗಿ ಬಂದು, “ನನಗೆ ಏನೂ ಕಾಣುತ್ತಿಲ್ಲ” ಎಂದನು. ಎಲೀಯನು ಆ ಸೇವಕನಿಗೆ, “ಹೋಗಿ ಮತ್ತೆ ನೋಡು” ಎಂದನು. ಹೀಗೆ ಆ ಸೇವಕನು ಏಳು ಸಲ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವನು ತನ್ನ ಸೇವಕನಿಗೆ - ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು ಏನೂ ತೋರುವದಿಲ್ಲ ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:43
11 ತಿಳಿವುಗಳ ಹೋಲಿಕೆ  

ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:


ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ.


ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.


ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮೆಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು.


ಏಳನೆಯ ಸಲ, ಸೇವಕನು ಹಿಂದಿರುಗಿ ಬಂದು, “ಒಬ್ಬ ಮನುಷ್ಯನ ಮುಷ್ಟಿ ಗಾತ್ರದ ಚಿಕ್ಕ ಮೋಡವನ್ನು ನಾನು ನೋಡಿದೆನು. ಆ ಮೋಡವು ಸಮುದ್ರದಿಂದ ಬರುತ್ತಿದೆ” ಎಂದನು. ಎಲೀಯನು ಸೇವಕನಿಗೆ, “ರಾಜನಾದ ಅಹಾಬನ ಬಳಿಗೆ ಹೋಗಿ, ತನ್ನ ರಥವನ್ನು ಸಿದ್ಧಗೊಳಿಸಿ ಈಗಲೇ ಮನೆಗೆ ಹೋಗುವಂತೆ ಅವನಿಗೆ ಹೇಳು, ಅವನೀಗ ಬಿಟ್ಟುಹೋಗದಿದ್ದರೆ, ಮಳೆಯು ಅವನನ್ನು ತಡೆಯುತ್ತದೆ” ಎಂದು ಹೇಳಿದನು.


ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.


ಎಲೀಷನು ಕೊಠಡಿಯಿಂದ ಹೊರಗೆ ಬಂದು ಮನೆಯಲ್ಲಿ ಸುತ್ತಲೂ ನಡೆದಾಡಿದನು. ನಂತರ ಅವನು ಕೊಠಡಿಯೊಳಕ್ಕೆ ಹಿಂದಿರುಗಿ ಹೋಗಿ ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗು ಏಳು ಸಾರಿ ಸೀನಿ ತನ್ನ ಕಣ್ಣುಗಳನ್ನು ತೆರೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು