1 ಅರಸುಗಳು 18:46 - ಪರಿಶುದ್ದ ಬೈಬಲ್46 ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು. ಅಧ್ಯಾಯವನ್ನು ನೋಡಿ |
ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.