1 ಅರಸುಗಳು 18:5 - ಪರಿಶುದ್ದ ಬೈಬಲ್5 ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5-6 ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಹಾಬನು ಅವನಿಗೆ - ನಾವು ದೇಶಸಂಚಾರಮಾಡುತ್ತಾ ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವವು; ಇಲ್ಲವಾದರೆ ಎಲ್ಲಾ ಸತ್ತುಹೋಗುವವು ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)