1 ಅರಸುಗಳು 18:7 - ಪರಿಶುದ್ದ ಬೈಬಲ್7 ಓಬದ್ಯನು ಸಂಚರಿಸುತ್ತಿರುವಾಗ ಎಲೀಯನನ್ನು ಭೇಟಿಯಾದನು. ಓಬದ್ಯನು ಎಲೀಯನನ್ನು ಕಂಡ ಕೂಡಲೇ ಅವನನ್ನು ಗುರುತಿಸಿ ಎಲೀಯನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನಾದ ಎಲೀಯನು ನೀನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ತಟ್ಟನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗ ನಮಸ್ಕಾರ ಮಾಡಿದನು. “ತಾವು ನನ್ನ ಸ್ವಾಮಿ ಎಲೀಯರೋ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಫಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗನಮಸ್ಕಾರ ಮಾಡಿ - ನೀನು ನನ್ನ ಸ್ವಾವಿುಯಾದ ಎಲೀಯನೋ ಎಂದು ಕೇಳಲು ಅವನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು. ಅಧ್ಯಾಯವನ್ನು ನೋಡಿ |
ನಾವು ನಿಮಗೆ, ‘ನಮಗೆ ಒಬ್ಬ ತಂದೆಯಿದ್ದಾನೆ, ಅವನು ವೃದ್ಧನಾಗಿದ್ದಾನೆ; ನಮಗೆ ಪ್ರಾಯದ ತಮ್ಮನಿದ್ದಾನೆ, ನಮ್ಮ ತಂದೆಗೆ ತುಂಬ ವಯಸ್ಸಾಗಿದ್ದಾಗ ಅವನು ಹುಟ್ಟಿದ್ದರಿಂದ ನಮ್ಮ ತಂದೆಯು ಅವನನ್ನು ಪ್ರೀತಿಸುತ್ತಾನೆ. ಆ ಕಿರಿಯ ಮಗನ ಸಹೋದರನು ಸತ್ತುಹೋದನು. ಆದ್ದರಿಂದ ಆ ತಾಯಿಯಲ್ಲಿ ಹುಟ್ಟಿದವರಲ್ಲಿ ಇವನೊಬ್ಬನೇ ಉಳಿದಿದ್ದಾನೆ. ನಮ್ಮ ತಂದೆಯು ಅವನನ್ನು ತುಂಬಾ ಪ್ರೀತಿಸುವನು’ ಎಂದು ಹೇಳಿದೆವು.