Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:1 - ಪರಿಶುದ್ದ ಬೈಬಲ್‌

1 ರಾಜನಾದ ಅಹಾಬನು ಈಜೆಬೆಲಳಿಗೆ ಎಲೀಯನು ಮಾಡಿದ ಎಲ್ಲಾ ಕಾರ್ಯಗಳನ್ನು ಹೇಳಿದನು. ಎಲೀಯನು (ಬಾಳನ) ಪ್ರವಾದಿಗಳನ್ನೆಲ್ಲ ಖಡ್ಗದಿಂದ ಹೇಗೆ ಕೊಂದನೆಂಬುದನ್ನೂ ಅಹಾಬನು ಅವಳಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಲೀಯನು ಪ್ರವಾದಿಗಳನ್ನೆಲ್ಲ ಕತ್ತಿಯಿಂದ ಸಂಹರಿಸಿದ್ದನ್ನೂ ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಲೀಯನು ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಲೀಯನು ಮಾಡಿದ್ದೆಲ್ಲವನ್ನೂ, ಅವನು ಖಡ್ಗದಿಂದ ಎಲ್ಲಾ ಪ್ರವಾದಿಗಳನ್ನು ಕೊಂದು ಹಾಕಿದ್ದೆಲ್ಲವನ್ನೂ, ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:1
6 ತಿಳಿವುಗಳ ಹೋಲಿಕೆ  

ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.


ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು