10 ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
10 ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
10 ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.
10 ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.
10 ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.
ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”
“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.
ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ.
ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ.
ಆಗ ಆ ಪ್ರವಾದಿಯು ರಾಜನಾದ ಅಹಾಬನಲ್ಲಿಗೆ ಹೋಗಿ, “ಅರಾಮಿನ ರಾಜನಾದ ಬೆನ್ಹದದನು ಮುಂದಿನ ವಸಂತಮಾಸದಲ್ಲಿ ನಿನ್ನ ವಿರುದ್ಧ ಯುದ್ಧಮಾಡಲು ಮತ್ತೆ ಬರುತ್ತಾನೆ. ಈಗ ನೀನು ಮನೆಗೆ ಹೋಗಿ ನಿನ್ನ ಸೈನ್ಯವನ್ನು ಬಲಪಡಿಸು. ಅವನ ವಿರುದ್ಧ ನೀನು ಸಮರ್ಥನಾಗಲು ಎಚ್ಚರಿಕೆಯಿಂದ ಉಪಾಯಗಳನ್ನು ಮಾಡು” ಎಂದು ಹೇಳಿದನು.
ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’” ಎಂದು ಹೇಳಿದನು.
ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.
ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.
ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.
ಆಗ ನಾನು “ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜನವಾದವು. ನಾನು ನನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ. ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಾಗಲಿಲ್ಲ. ಆದ್ದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ” ಎಂದು ಹೇಳಿದೆನು.