1 ಅರಸುಗಳು 19:13 - ಪರಿಶುದ್ದ ಬೈಬಲ್13 ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕಡೆಗೆ ಮಂದಮಾರುತ ಶಬ್ದ! ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು. ಅಧ್ಯಾಯವನ್ನು ನೋಡಿ |