1 ಅರಸುಗಳು 19:17 - ಪರಿಶುದ್ದ ಬೈಬಲ್17 ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು. ಅಧ್ಯಾಯವನ್ನು ನೋಡಿ |
ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.