1 ಅರಸುಗಳು 19:2 - ಪರಿಶುದ್ದ ಬೈಬಲ್2 ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |
ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.
ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.