1 ಅರಸುಗಳು 19:4 - ಪರಿಶುದ್ದ ಬೈಬಲ್4 ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.