Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:15 - ಪರಿಶುದ್ದ ಬೈಬಲ್‌

15 ಅದೋನೀಯನು, “ಒಂದು ಕಾಲದಲ್ಲಿ ರಾಜ್ಯಾಧಿಕಾರವು ನನ್ನದಾಗಿತ್ತೆಂಬುದು ನಿನ್ನ ನೆನಪಿನಲ್ಲಿದೆ. ಇಸ್ರೇಲಿನ ಜನರೆಲ್ಲರೂ ನಾನೇ ಅವರ ರಾಜನೆಂದು ತಿಳಿದಿದ್ದರು. ಆದರೆ ಸಂಗತಿಗಳು ಬದಲಾದವು. ಈಗ ನನ್ನ ಸೋದರನೇ ರಾಜನು. ಯೆಹೋವನು ಅವನನ್ನು ರಾಜನನ್ನಾಗಿ ಆರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಅವನು, “ರಾಜ್ಯ ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಯೇಲರೆಲ್ಲರು ಎದುರು ನೋಡುತ್ತಿದ್ದರೆಂಬುದು ನಿನಗೆ ತಿಳಿದ ವಿಷಯ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಸರ್ವೇಶ್ವರನಿಂದಲೇ ಅವನಿಗೆ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಅವನು - ರಾಜ್ಯವು ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಾಯೇಲ್ಯರೆಲ್ಲರೂ ಎದುರು ನೋಡುತ್ತಿದ್ದರೆಂದು ನೀನು ಬಲ್ಲೆಯಷ್ಟೆ; ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:15
19 ತಿಳಿವುಗಳ ಹೋಲಿಕೆ  

ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.


ರಾಜನಾದ ದಾವೀದನ ಮಗನಾದ ಅದೋನೀಯನು ಬಹಳ ಗರ್ವಿಷ್ಠನಾದನು. ಅವನು, “ನಾನೇ ರಾಜನಾಗುತ್ತೇನೆ” ಎಂದು ಹೇಳಿಕೊಂಡನು. (ಅದೋನೀಯನ ತಾಯಿಯ ಹೆಸರು ಹಗ್ಗೀತ.) ಅದೋನೀಯನು ರಾಜನಾಗಬೇಕೆಂಬುದಾಗಿ ಬಹಳ ಆಸೆಪಟ್ಟನು. ಆದ್ದರಿಂದ ಅವನು ತನಗಾಗಿ ಒಂದು ರಥವನ್ನು, ಕುದುರೆಗಳನ್ನು ಮತ್ತು ರಥದ ಮುಂದೆ ಓಡುವಂತಹ ಐವತ್ತು ಜನರನ್ನು ಪಡೆದನು.


ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದ್ದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಹೂಷೈಯು, “ಯೆಹೋವನು ಆರಿಸಿಕೊಂಡ ವ್ಯಕ್ತಿಗೆ ನಾನು ಸೇರಿದವನು. ಈ ಜನರು ಮತ್ತು ಇಸ್ರೇಲಿನ ಜನರು ನಿನ್ನನ್ನು ಆರಿಸಿದ್ದಾರೆ. ನಾನು ನಿನ್ನೊಡನೆ ನೆಲೆಸುತ್ತೇನೆ.


“‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.


ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ಷಾಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು.


ರಾಜನಾದ ದಾವೀದನ ಬಳಿಗೆ ತೀರ್ಪಿಗಾಗಿ ಬರುವ ಎಲ್ಲಾ ಇಸ್ರೇಲರಿಗೆ ಅಬ್ಷಾಲೋಮನು ಇದೇ ರೀತಿ ಮಾಡುತ್ತಿದ್ದನು. ಹೀಗೆ, ಅಬ್ಷಾಲೋಮನು ಇಸ್ರೇಲಿನ ಜನರೆಲ್ಲರ ಹೃದಯಗಳನ್ನು ಗೆದ್ದುಕೊಂಡನು.


ನಂತರ ದಾವೀದನು ತನ್ನ ಪತ್ನಿಯಾದ ಬತ್ಷೆಬೆಳನ್ನು ಸಂತೈಸಿ ಅವಳೊಂದಿಗೆ ಮಲಗಿಕೊಂಡನು. ಬತ್ಷೆಬೆಳು ಮತ್ತೆ ಗರ್ಭಿಣಿಯಾದಳು. ಅವಳಿಗೆ ಮತ್ತೊಂದು ಗಂಡು ಮಗುವಾಯಿತು. ಆ ಮಗುವಿಗೆ ಸೊಲೊಮೋನ್ ಎಂದು ದಾವೀದನು ಹೆಸರಿಟ್ಟನು. ಯೆಹೋವನು ಸೊಲೊಮೋನನನ್ನು ಪ್ರೀತಿಸಿದನು.


ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ.


ಅದೋನೀಯನು ನಾಲ್ಕನೆಯ ಮಗ. ಹಗ್ಗೀತಳು ಅದೋನೀಯನ ತಾಯಿ. ಶೆಫಟ್ಯನು ಐದನೆಯ ಮಗ. ಅಬೀಟಲಳು ಶೆಫಟ್ಯನ ತಾಯಿ.


ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.


ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದು ಉತ್ತರಿಸಿದನು. “ಹಾಗಾದರೆ ಹೇಳು” ಎಂದು ಬತ್ಷೆಬೆಳು ಹೇಳಿದಳು.


ಆದ್ದರಿಂದ ಈಗ ನನ್ನಲ್ಲಿ ಒಂದು ಕೋರಿಕೆಯಿದೆ, ಅದನ್ನು ನೀನು ನಿರಾಕರಿಸಬೇಡ” ಎಂದನು. ಬತ್ಷೆಬೆಳು, “ನಿನಗೇನು ಬೇಕಾಗಿದೆ?” ಎಂದು ಕೇಳಿದಳು.


ರಾಜನಾದ ಸೊಲೊಮೋನನು ತನ್ನ ತಾಯಿಗೆ, “ಅಬೀಷಗಳನ್ನು ಅವನಿಗೆ ಕೊಡು ಎಂಬುದಾಗಿ ನೀನೇಕೆ ನನ್ನನ್ನು ಕೇಳುತ್ತಿರುವೆ? ಅವನು ನನ್ನ ಹಿರಿಯಣ್ಣನಾಗಿರುವುದರಿಂದ ಅವನನ್ನೇ ರಾಜನನ್ನಾಗಿ ಮಾಡೆಂದು ನೀನು ಕೇಳದಿರುವುದೇಕೆ? ಯಾಜಕನಾದ ಎಬ್ಯಾತಾರನೂ ಯೋವಾಬನೂ ಅವನಿಗೆ ಬೆಂಬಲವನ್ನು ನೀಡಿದರು!” ಎಂದು ಉತ್ತರಿಸಿದನು.


ಯಾಜಕನಾದ ಚಾದೋಕನು ಪವಿತ್ರಗುಡಾರದಿಂದ ಎಣ್ಣೆಯನ್ನು ತೆಗೆದುಕೊಂಡು ಬಂದನು. ಸೊಲೊಮೋನನು ರಾಜನೆಂದು ತೋರಿಸಲು ಅವನ ತಲೆಯ ಮೇಲೆ ಚಾದೋಕನು ಎಣ್ಣೆಯನ್ನು ಸುರಿದನು. ದಾವೀದನ ಜನರು ತುತ್ತೂರಿಯನ್ನು ಊದಿದರು. ಆಗ ಎಲ್ಲಾ ಜನರೂ, “ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು