1 ಅರಸುಗಳು 2:19 - ಪರಿಶುದ್ದ ಬೈಬಲ್19 ಬತ್ಷೆಬೆಳು ರಾಜನಾದ ಸೊಲೊಮೋನನೊಂದಿಗೆ ಮಾತನಾಡಲು ಹೋದಳು. ಸೊಲೊಮೋನನು ಆಕೆಯನ್ನು ಕಂಡು ಎದ್ದುನಿಂತು ಅವಳಿಗೆ ಬಾಗಿ ನಮಸ್ಕರಿಸಿ, ಸಿಂಹಾಸನದ ಮೇಲೆ ಕುಳಿತನು. ಅವನು ತನ್ನ ತಾಯಿಗಾಗಿ ಮತ್ತೊಂದು ಸಿಂಹಾಸನವನ್ನು ತರಲು ಕೆಲವು ಸೇವಕರಿಗೆ ಹೇಳಿದನು. ನಂತರ ಅವಳು ಅವನ ಬಲಗಡೆಯಲ್ಲಿ ಕುಳಿತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಕೆ ಅದೋನೀಯನ ಪರವಾಗಿ ಮಾತಾಡಲು ಅರಸ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನೇ ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು ರಾಜಮಾತೆಗಾಗಿ ಒಂದು ಆಸನವನ್ನು ತರಿಸಿದನು. ಆಕೆ ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಕೆಯು ಅದೋನೀಯನಿಗಾಗಿ ಮಾತಾಡುವದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕೂತು ರಾಜಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕೂತುಕೊಂಡು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವುದಕ್ಕೆ ಅರಸನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು, ಅವಳಿಗೆ ಅಡ್ಡಬಿದ್ದು, ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜಮಾತೆಗೋಸ್ಕರ ಆಸನವನ್ನು ಹಾಕಿಸಿದನು. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅಧ್ಯಾಯವನ್ನು ನೋಡಿ |