Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:25 - ಪರಿಶುದ್ದ ಬೈಬಲ್‌

25 ರಾಜನಾದ ಸೊಲೊಮೋನನು ಬೆನಾಯನಿಗೆ ಆಜ್ಞಾಪಿಸಿದನು. ಬೆನಾಯನು ಹೋಗಿ ಅದೋನೀಯನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಂತೆಯೇ ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದನು. ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದದರಿಂದ ಅವನು ಹೋಗಿ ಅವನನ್ನು ಹೊಡೆದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನನ್ನು ಕಳುಹಿಸಿದನು. ಇವನು ಹೋಗಿ ಅದೋನೀಯನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:25
11 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ನಂತರ ರಾಜನು ಶಿಮ್ಮಿಯನ್ನು ಕೊಲ್ಲಲು ಬೆನಾಯನಿಗೆ ಆಜ್ಞಾಪಿಸಿದನು. ಅಂತೆಯೇ, ಬೆನಾಯನು ಅವನನ್ನು ಸಂಹರಿಸಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.


ಆದ್ದರಿಂದ ಯೆಹೋಯಾದಾವನ ಮಗನಾದ ಬೆನಾಯನು ಯೋವಾಬನನ್ನು ಕೊಂದನು. ಯೋವಾಬನನ್ನು ಅರಣ್ಯದಲ್ಲಿನ ಅವನ ಮನೆಯ ಸಮೀಪದಲ್ಲೇ ಸಮಾಧಿ ಮಾಡಿದರು.


ಆಗ ರಾಜನು ಬೆನಾಯನಿಗೆ, “ಅವನು ಹೇಳಿದಂತೆ ಮಾಡು! ಅವನನ್ನು ಅಲ್ಲಿಯೇ ಕೊಂದುಬಿಡು. ನಂತರ ಅವನನ್ನು ಸಮಾಧಿ ಮಾಡು. ಆಗ ನನ್ನ ಕುಟುಂಬದವರು ಮತ್ತು ನಾನು ಯೋವಾಬನ ದೋಷದಿಂದ ಮುಕ್ತರಾಗುವೆವು. ಮುಗ್ಧ ಜನರು ಯೋವಾಬನಿಂದ ಕೊಲ್ಲಲ್ಪಟ್ಟ ಕಾರಣ ಈ ದೋಷವುಂಟಾಯಿತು.


ದಾವೀದನು, ರೇಕಾಬನನ್ನು ಮತ್ತು ಬಾಣನನ್ನು ಕೊಲ್ಲಲು ಯುವಕರಿಗೆ ಆಜ್ಞಾಪಿಸಿದನು. ಆಗ ಆ ಯುವಕರು ರೇಕಾಬನ ಮತ್ತು ಬಾಣನ ಕೈಕಾಲುಗಳನ್ನು ಕತ್ತರಿಸಿಹಾಕಿ, ಹೆಬ್ರೋನಿನ ಕೊಳದ ಬಳಿಯಲ್ಲಿ ಅವರ ದೇಹಗಳನ್ನು ನೇತುಹಾಕಿದರು. ನಂತರ ಅವರು ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು ಹೋಗಿ, ಹೆಬ್ರೋನಿನಲ್ಲಿ ಅಬ್ನೇರನನ್ನು ಸಮಾಧಿಮಾಡಿದ ಸ್ಥಳದಲ್ಲೇ ಸಮಾಧಿಮಾಡಿದರು.


ನಂತರ ದಾವೀದನು ತನ್ನ ಗುಂಪಿನ ಯುವಕನೊಬ್ಬನನ್ನು ಕರೆದು, “ನೀನು ಹೋಗಿ ಆ ಅಮಾಲೇಕ್ಯನನ್ನು ಕೊಲ್ಲು” ಎಂದು ಹೇಳಿದನು. ಇಸ್ರೇಲರ ಯುವಕನು ಆ ಅಮಾಲೇಕ್ಯನನ್ನು ಕೊಂದುಬಿಟ್ಟನು. ದಾವೀದನು ಆ ಅಮಾಲೇಕ್ಯನಿಗೆ, “ನಿನ್ನ ಸಾವಿಗೆ ನೀನೇ ಕಾರಣನು. ನೀನು ನಿನ್ನ ವಿರುದ್ಧವೇ ಸಾಕ್ಷಿ ಹೇಳಿದೆ. ‘ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ನಾನು ಕೊಂದೆ’ ಎಂದು ನೀನೇ ಹೇಳಿದೆ” ಎಂದನು.


ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’


ಯೋವಾಬನು ಯೆಹೋವನ ಗುಡಾರದಲ್ಲಿ ಯಜ್ಞವೇದಿಕೆಯ ಹತ್ತಿರ ಇದ್ದಾನೆಂದು ಯಾರೋ ಒಬ್ಬನು ರಾಜನಾದ ಸೊಲೊಮೋನನಿಗೆ ತಿಳಿಸಿದನು. ಆದ್ದರಿಂದ ಸೊಲೊಮೋನನು ಬೆನಾಯನಿಗೆ, ಹೋಗಿ ಅವನನ್ನು ಕೊಂದುಬಿಡುವಂತೆ ಆಜ್ಞಾಪಿಸಿದನು.


ಆಗ ಅವರು ಸಂಸೋನನಿಗೆ, “ನಾವು ನಿನ್ನನ್ನು ಬಂಧಿಸಲು ಬಂದಿದ್ದೇವೆ. ನಾವು ನಿನ್ನನ್ನು ಫಿಲಿಷ್ಟಿಯರಿಗೆ ಕೊಡುತ್ತೇವೆ” ಎಂದರು. ಸಂಸೋನನು ಯೆಹೂದ್ಯರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು