Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:26 - ಪರಿಶುದ್ದ ಬೈಬಲ್‌

26 ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ - ನೀನು ಅಣತೋತಿನಲ್ಲಿರುವ ನಿನ್ನ ಸ್ವಾಸ್ತ್ಯಕ್ಕೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:26
16 ತಿಳಿವುಗಳ ಹೋಲಿಕೆ  

ಅನಾತೋತ್ ಮತ್ತು ಅಲ್ಮೋನ್. ಈ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನೂ ಅವರಿಗೆ ಕೊಡಲಾಯಿತು.


ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”


ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು.


ನೀನು ದೊಡ್ಡ ತಪ್ಪನ್ನು ಮಾಡಿದೆ! ಯೆಹೋವನಾಣೆ, ನೀನು ಮತ್ತು ನಿನ್ನ ಜನರು ಸಾಯಲೇಬೇಕಾಗಿತ್ತು. ಏಕೆನ್ನುವಿಯೊ? ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾದ ನಿನ್ನ ಒಡೆಯನನ್ನು ನೀನು ರಕ್ಷಿಸಲಾಗಲಿಲ್ಲ. ಸೌಲನ ತಲೆಯ ಹತ್ತಿರವಿದ್ದ ಭರ್ಜಿ ಮತ್ತು ನೀರಿನ ತಂಬಿಗೆಯನ್ನು ಹುಡುಕಿರಿ, ಅವು ಎಲ್ಲಿಗೆ ಹೋದವು?” ಎಂದು ಕೇಳಿದನು.


ಅನೇಕ ಸಂಗತಿಗಳನ್ನು ಅನುಭವದಿಂದ ತಿಳಿದುಕೊಂಡಿದ್ದೀರಿ. ಆ ಅನುಭವಗಳೆಲ್ಲಾ ವ್ಯರ್ಥಗೊಂಡವೇ?


“ನೀವು ನನ್ನ ಅನೇಕ ಕಷ್ಟಗಳಲ್ಲಿ ನನ್ನ ಸಂಗಡ ಇದ್ದವರು.


ಬಾತ್‌ಗಲ್ಲೀಮ್‌ನವರೇ, ಚೀರಾಡಿರಿ! ಲಯೆಷವೇ, ಕಿವಿಗೊಡು. ಅನಾತೋತೇ, ನನಗೆ ಉತ್ತರಕೊಡು!


ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು.


ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.


ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.


ದಾವೀದನು ಶ್ರೀಮಂತನ ಮೇಲೆ ಬಹಳ ಕೋಪಗೊಂಡನು. ಅವನು ನಾತಾನನಿಗೆ, “ಯೆಹೋವನ ಆಣೆಯಾಗಿ ಈ ಕಾರ್ಯವನ್ನು ಮಾಡಿದ ಮನುಷ್ಯನು ಸಾಯಲೇಬೇಕು!


ಇಸ್ರೇಲಿಗೆ ಶುಭಗಳಾದರೂ ನಿನ್ನ ಮನೆಯಲ್ಲಿ ಅಶುಭಗಳಿರುವುದನ್ನು ನೀನು ನೋಡುವೆ. ನಿನ್ನ ಕುಟುಂಬದಲ್ಲಿ ಯಾರೂ ವೃದ್ಧಾಪ್ಯದವರೆಗೆ ಬದುಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು