Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:29 - ಪರಿಶುದ್ದ ಬೈಬಲ್‌

29 ಯೋವಾಬನು ಯೆಹೋವನ ಗುಡಾರದಲ್ಲಿ ಯಜ್ಞವೇದಿಕೆಯ ಹತ್ತಿರ ಇದ್ದಾನೆಂದು ಯಾರೋ ಒಬ್ಬನು ರಾಜನಾದ ಸೊಲೊಮೋನನಿಗೆ ತಿಳಿಸಿದನು. ಆದ್ದರಿಂದ ಸೊಲೊಮೋನನು ಬೆನಾಯನಿಗೆ, ಹೋಗಿ ಅವನನ್ನು ಕೊಂದುಬಿಡುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೋವಾಬನು ಸರ್ವೇಶ್ವರನ ಗು಼ಡಾರಕ್ಕೆ ಓಡಿಹೋಗಿ ಬಲಿಪೀಠದ ಹತ್ತಿರ ಇದ್ದಾನೆ ಎಂಬ ಸುದ್ದಿ ಅರಸ ಸೊಲೊಮೋನನಿಗೆ ತಲುಪಿತು. ಅವನು ಯೆಹೋಯಾದಾವನ ಮಗ ಬೆನಾಯನಿಗೆ, “ಹೋಗಿ ಅವನನ್ನು ಕೊಂದುಹಾಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ - ಹೋಗಿ ಅವನ ಮೇಲೆ ಬೀಳು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೋವಾಬನು ಯೆಹೋವ ದೇವರ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಬಳಿಯಲ್ಲಿ ಇದ್ದಾನೆ, ಎಂಬ ಸುದ್ದಿ ಅರಸನಾದ ಸೊಲೊಮೋನನಿಗೆ ತಿಳಿಯಿತು. ಆಗ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ, “ನೀನು ಹೋಗಿ ಅವನನ್ನು ಕೊಂದುಹಾಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:29
9 ತಿಳಿವುಗಳ ಹೋಲಿಕೆ  

ರಾಜನಾದ ಸೊಲೊಮೋನನು ಬೆನಾಯನಿಗೆ ಆಜ್ಞಾಪಿಸಿದನು. ಬೆನಾಯನು ಹೋಗಿ ಅದೋನೀಯನನ್ನು ಕೊಂದುಹಾಕಿದನು.


ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


ನಂತರ ರಾಜನು ಶಿಮ್ಮಿಯನ್ನು ಕೊಲ್ಲಲು ಬೆನಾಯನಿಗೆ ಆಜ್ಞಾಪಿಸಿದನು. ಅಂತೆಯೇ, ಬೆನಾಯನು ಅವನನ್ನು ಸಂಹರಿಸಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.


ಆಗ ರಾಜನು ಬೆನಾಯನಿಗೆ, “ಅವನು ಹೇಳಿದಂತೆ ಮಾಡು! ಅವನನ್ನು ಅಲ್ಲಿಯೇ ಕೊಂದುಬಿಡು. ನಂತರ ಅವನನ್ನು ಸಮಾಧಿ ಮಾಡು. ಆಗ ನನ್ನ ಕುಟುಂಬದವರು ಮತ್ತು ನಾನು ಯೋವಾಬನ ದೋಷದಿಂದ ಮುಕ್ತರಾಗುವೆವು. ಮುಗ್ಧ ಜನರು ಯೋವಾಬನಿಂದ ಕೊಲ್ಲಲ್ಪಟ್ಟ ಕಾರಣ ಈ ದೋಷವುಂಟಾಯಿತು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಬೆನಾಯನು ಯೆಹೋವನ ಗುಡಾರದೊಳಕ್ಕೆ ಹೋಗಿ ಯೋವಾಬನಿಗೆ, “ರಾಜನ ಆಜ್ಞೆಯಂತೆ ‘ಹೊರಗೆ ಬಾ!’” ಎಂದು ಹೇಳಿದನು. ಆದರೆ ಯೋವಾಬನು, “ಇಲ್ಲ, ನಾನಿಲ್ಲೇ ಸಾಯುತ್ತೇನೆ” ಎಂದನು. ಆದ್ದರಿಂದ ಬೆನಾಯನು ರಾಜನ ಬಳಿಗೆ ಹಿಂದಿರುಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.


ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು