Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:31 - ಪರಿಶುದ್ದ ಬೈಬಲ್‌

31 ಆಗ ರಾಜನು ಬೆನಾಯನಿಗೆ, “ಅವನು ಹೇಳಿದಂತೆ ಮಾಡು! ಅವನನ್ನು ಅಲ್ಲಿಯೇ ಕೊಂದುಬಿಡು. ನಂತರ ಅವನನ್ನು ಸಮಾಧಿ ಮಾಡು. ಆಗ ನನ್ನ ಕುಟುಂಬದವರು ಮತ್ತು ನಾನು ಯೋವಾಬನ ದೋಷದಿಂದ ಮುಕ್ತರಾಗುವೆವು. ಮುಗ್ಧ ಜನರು ಯೋವಾಬನಿಂದ ಕೊಲ್ಲಲ್ಪಟ್ಟ ಕಾರಣ ಈ ದೋಷವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅರಸನು, “ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದುದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅರಸನು ಅವನಿಗೆ - ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:31
11 ತಿಳಿವುಗಳ ಹೋಲಿಕೆ  

“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.


ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.


ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.


ಯೆಹೋವನು, ‘ನೀನು ನಿನ್ನೆ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾಮನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು.


ತರುವಾಯ ದಾವೀದನಿಗೆ ಸುದ್ದಿಯು ತಿಳಿಯಿತು. ದಾವೀದನು, “ನನ್ನ ರಾಜ್ಯವಾಗಲಿ ನಾನಾಗಲಿ ನೇರನ ಮಗನಾದ ಅಬ್ನೇರನ ಸಾವಿಗೆ ಕಾರಣರಲ್ಲ. ಯೆಹೋವನಿಗೆ ಇದು ತಿಳಿದಿದೆ.


ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.


ಬೆನಾಯನು ಯೆಹೋವನ ಗುಡಾರದೊಳಕ್ಕೆ ಹೋಗಿ ಯೋವಾಬನಿಗೆ, “ರಾಜನ ಆಜ್ಞೆಯಂತೆ ‘ಹೊರಗೆ ಬಾ!’” ಎಂದು ಹೇಳಿದನು. ಆದರೆ ಯೋವಾಬನು, “ಇಲ್ಲ, ನಾನಿಲ್ಲೇ ಸಾಯುತ್ತೇನೆ” ಎಂದನು. ಆದ್ದರಿಂದ ಬೆನಾಯನು ರಾಜನ ಬಳಿಗೆ ಹಿಂದಿರುಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು