Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:36 - ಪರಿಶುದ್ದ ಬೈಬಲ್‌

36 ನಂತರ ರಾಜನು ಶಿಮ್ಮಿಯನ್ನು ಕರೆತರಲು ಕಳುಹಿಸಿದನು. ರಾಜನು ಅವನಿಗೆ, “ಜೆರುಸಲೇಮಿನಲ್ಲಿ ನಿನಗಾಗಿ ಒಂದು ಮನೆಯನ್ನು ನಿರ್ಮಿಸು. ಆ ಮನೆಯಲ್ಲಿ ವಾಸಮಾಡು, ನಗರವನ್ನು ಬಿಟ್ಟುಹೋಗದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ತರುವಾಯ ಅರಸನು ಶಿಮ್ಮಿಯನ್ನು ಕರೆಯಿಸಿ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಜೆರುಸಲೇಮಿನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ತರುವಾಯ ಅರಸನು ಶಿಮ್ಮಿಯನ್ನು ಕರಿಸಿ ಅವನಿಗೆ - ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇವಿುನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಅರಸನು ಶಿಮ್ಮಿಯನ್ನು ಕರೆಯಿಸಿ ಅವನಿಗೆ, “ನೀನು ಯೆರೂಸಲೇಮಿನಲ್ಲಿ, ನಿನಗೆ ಮನೆಯನ್ನು ಕಟ್ಟಿಸಿಕೊಂಡು, ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:36
7 ತಿಳಿವುಗಳ ಹೋಲಿಕೆ  

ಜ್ಞಾನಿಯಾದ ರಾಜನಿಗೆ ಕೆಡುಕರು ಯಾರೆಂಬುದು ಗೊತ್ತಾಗುವುದು; ಅವನು ಅವರನ್ನು ದಂಡಿಸುವನು.


ರಾಜನು ನ್ಯಾಯತೀರ್ಪು ಮಾಡುವಾಗ ತನ್ನ ಕಣ್ಣುಗಳಿಂದ ದುಷ್ಟತನವನ್ನು ಶೋಧಿಸುವನು.


ರಾಜನಾದ ಸೊಲೊಮೋನನು ಅದೋನೀಯನನ್ನು ಕರೆತರಲು ಕೆಲವು ಜನರನ್ನು ಕಳುಹಿಸಿದನು. ಅವರು ಅದೋನೀಯನನ್ನು ರಾಜನಾದ ಸೊಲೊಮೋನನ ಬಳಿಗೆ ಕರೆದುತಂದರು. ಅದೋನೀಯನು ರಾಜನಾದ ಸೊಲೊಮೋನನ ಬಳಿಗೆ ಬಂದು, ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ, “ಮನೆಗೆ ಹೋಗು” ಎಂದನು.


ಅಬ್ಷಾಲೋಮನು ಎರಡು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಇದ್ದನು. ಆದರೂ ರಾಜನಾದ ದಾವೀದನನ್ನು ಭೇಟಿಯಾಗಲು ಅವನಿಗೆ ಅವಕಾಶ ದೊರಕಲಿಲ್ಲ.


ಆದರೆ ರಾಜನಾದ ದಾವೀದನು, “ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿ ಹೋಗಲಿ. ಅವನು ನನ್ನನ್ನು ನೋಡಲು ಬರುವುದು ಬೇಡ” ಎಂದನು. ಆದ್ದರಿಂದ ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದನು. ಅಬ್ಷಾಲೋಮನು ರಾಜನನ್ನು ನೋಡಲು ಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು