1 ಅರಸುಗಳು 2:42 - ಪರಿಶುದ್ದ ಬೈಬಲ್42 ಸೊಲೊಮೋನನು ಶಿಮ್ಮಿಯನ್ನು ಕರೆಯಿಸಿ, “ನೀನು ಜೆರುಸಲೇಮನ್ನು ಬಿಟ್ಟುಹೋದರೆ ಮರಣಶಿಕ್ಷೆಯಾಗುವುದೆಂದು ನಾನು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದೆನು. ನೀನು ಬೇರೆಲ್ಲಾದರೂ ಹೋದರೆ ಅದು ನಿನ್ನ ಸ್ವಂತ ತಪ್ಪಾಗುವುದೆಂದೂ ನಿನ್ನನ್ನು ಕೊಲ್ಲಲಾಗುವುದೆಂದೂ ನಾನು ನಿನ್ನನ್ನು ಎಚ್ಚರಿಸಿದ್ದೆನು. ಅದಕ್ಕೆ ನೀನೂ ಒಪ್ಪಿಗೆ ನೀಡಿ ನನಗೆ ವಿಧೇಯನಾಗಿರುವುದಾಗಿ ತಿಳಿಸಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ‘ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ’ ಎಂದು ಹೇಳಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರು ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ಖಂಡಿತವಾಗಿ ಹೇಳಿ ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡನಲ್ಲವೆ? ಆಗ ನೀನು, ‘ಒಳ್ಳೆಯದು, ಹಾಗೆಯೇ ಮಾಡುತ್ತೇನೆ,’ ಎಂದು ಹೇಳಿದೆಯಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣತೆಗೆದುಕೊಂಡೆನಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ? ಅಧ್ಯಾಯವನ್ನು ನೋಡಿ |