Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:44 - ಪರಿಶುದ್ದ ಬೈಬಲ್‌

44 ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ ಎಂಬುದು ನಿನಗೆ ತಿಳಿದಿದೆ. ಈಗ ನಿನ್ನ ಆ ಕೆಟ್ಟಕಾರ್ಯಗಳಿಗಾಗಿ ಯೆಹೋವನು ನಿನ್ನನ್ನು ದಂಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇದಲ್ಲದೆ ಅರಸನು ಅವನಿಗೆ - ನೀನು ನನ್ನ ತಂದೆಯಾದ ದಾವೀದನಿಗೆ ವಿರೋಧವಾಗಿ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:44
14 ತಿಳಿವುಗಳ ಹೋಲಿಕೆ  

ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜೀವದಾಣೆ, ನಾನು ಯೆಹೂದದ ರಾಜನನ್ನು ಶಿಕ್ಷಿಸುವೆನು. ಯಾಕೆಂದರೆ ಅವನು ನನ್ನ ಮುಂದೆ ಮಾಡಿದ ಪ್ರಮಾಣಕ್ಕೆ ಗಮನಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಪ್ಪಂದವನ್ನು ಅವನು ಮುರಿದುಹಾಕಿದನು.


ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು.


ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.


ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.


ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು. ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು.


ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.


ನೀನು ದೇವರಿಗೆ ಮಾಡಿದ ಪ್ರಮಾಣವನ್ನು ಯಾಕೆ ಕೈಕೊಳ್ಳಲಿಲ್ಲ? ನೀನು ನನ್ನ ಆಜ್ಞೆಗೆ ಯಾಕೆ ವಿಧೇಯನಾಗಲಿಲ್ಲ?


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.


ಈ ಜನರು ಯೆಹೋವಾಷಾನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ “ರಾಜನು ಚಿರಂಜೀವಿಯಾಗಿರಲಿ!” ಎಂದು ಆರ್ಭಟಿಸಿದರು.


ನನ್ನ ಶತ್ರುವಿಗೂ ನನ್ನನ್ನು ಕೊಲ್ಲಬೇಕೆಂದಿರುವವರಿಗೂ ಯೆಹೋವನು ಅವುಗಳನ್ನು ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು