Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:46 - ಪರಿಶುದ್ದ ಬೈಬಲ್‌

46 ನಂತರ ರಾಜನು ಶಿಮ್ಮಿಯನ್ನು ಕೊಲ್ಲಲು ಬೆನಾಯನಿಗೆ ಆಜ್ಞಾಪಿಸಿದನು. ಅಂತೆಯೇ, ಬೆನಾಯನು ಅವನನ್ನು ಸಂಹರಿಸಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಬಳಿಕ ಯೆಹೋಯಾದವನ ಮಗ ಬೆನಾಯನಿಗೆ ಅವನನ್ನು ಸಂಹರಿಸಬೇಕೆಂದು ಆಜ್ಞಾಪಿಸಿದನು. ಅಂತೆಯೇ ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರ ಸುಭದ್ರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯೆಹೋಯಾದಾವನ ಮಗನಾದ ಬೆನಾಯನಿಗೆ ಅವನನ್ನು ಸಂಹರಿಸೆಂದು ಆಜ್ಞಾಪಿಸಲು ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದ್ದರಿಂದ, ಅವನು ಹೊರಟು ಹೋಗಿ ಶಿಮ್ಮಿಯ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:46
7 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನು ದಾವೀದನ ಮಗನಾದ ಸೊಲೊಮೋನನೊಂದಿಗೆ ಇದ್ದುದರಿಂದ ಸೊಲೊಮೋನನು ಬಹು ಬಲಿಷ್ಠನಾದ ಅರಸನಾಗಿ ಪ್ರಖ್ಯಾತನಾದನು.


ಈಗ ಸೊಲೊಮೋನನು ತನ್ನ ತಂದೆಯ ಸಿಂಹಾಸನದ ಮೇಲೆ ಕುಳಿತು ಆಡಳಿತ ನಡೆಸತೊಡಗಿದನು. ರಾಜ್ಯವು ಅವನ ಪೂರ್ಣ ಹತೋಟಿಯಲ್ಲಿ ಇತ್ತು.


ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.


ಆದರೆ ಯೆಹೋವನು ನನ್ನನ್ನು ಆಶೀರ್ವದಿಸುತ್ತಾನೆ. ಆತನು ದಾವೀದನ ಸಿಂಹಾಸನವನ್ನು ಎಂದೆಂದಿಗೂ ಸಂರಕ್ಷಿಸುವನು” ಎಂದು ಹೇಳಿದನು.


ರಾಜನಾದ ಸೊಲೊಮೋನನು ಬೆನಾಯನಿಗೆ ಆಜ್ಞಾಪಿಸಿದನು. ಬೆನಾಯನು ಹೋಗಿ ಅದೋನೀಯನನ್ನು ಕೊಂದುಹಾಕಿದನು.


ಆದ್ದರಿಂದ ಯೆಹೋಯಾದಾವನ ಮಗನಾದ ಬೆನಾಯನು ಯೋವಾಬನನ್ನು ಕೊಂದನು. ಯೋವಾಬನನ್ನು ಅರಣ್ಯದಲ್ಲಿನ ಅವನ ಮನೆಯ ಸಮೀಪದಲ್ಲೇ ಸಮಾಧಿ ಮಾಡಿದರು.


ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು