Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:5 - ಪರಿಶುದ್ದ ಬೈಬಲ್‌

5 “ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಚೆರೂಯಳ ಮಗ ಯೋವಾಬನು ನನಗೆ ಮಾಡಿರುವುದನ್ನು ನೀನು ಬಲ್ಲೆ; ಅವನು ಇಬ್ಬರು ಇಸ್ರಯೇಲ್ ಸೇನಾಪತಿಗಳನ್ನು ಅಂದರೆ, ನೇರನ ಮಗ ಅಬ್ನೇರನನ್ನೂಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತಸುರಿಸಿ ಆ ಕಲೆಯನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವದನ್ನು ಬಲ್ಲೆಯಲ್ಲಾ; ಅವನು ಇಬ್ಬರು ಇಸ್ರಾಯೇಲ್ ಸೇನಾಪತಿಗಳಾದ ನೇರನ ಮಗ ಅಬ್ನೇರನನ್ನೂ ಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತ ಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:5
18 ತಿಳಿವುಗಳ ಹೋಲಿಕೆ  

ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.


ಆ ಮನುಷ್ಯನು ಯೋವಾಬನಿಗೆ, “ನೀನು ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದರೂ ನಾನು ರಾಜನ ಮಗನನ್ನು ಕೊಲ್ಲಲು ಪ್ರಯತ್ನಿಸುತ್ತಿರಲಿಲ್ಲ. ಏಕೆಂದರೆ ನಿನಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ ರಾಜನು ನೀಡಿದ್ದ ಆಜ್ಞೆಯನ್ನು ನಾವು ಕೇಳಿದ್ದೇವೆ. ‘ಎಚ್ಚರದಿಂದಿರಿ, ಯುವಕನಾದ ಅಬ್ಷಾಲೋಮನಿಗೆ ಕೇಡುಮಾಡದಿರಿ’ ಎಂದು ರಾಜನು ಹೇಳಿದ್ದಾನೆ.


ರಾಜನು ಯೋವಾಬನಿಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ, “ನೀವು ನನಗೋಸ್ಕರವಾಗಿ ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿ!” ಎಂದು ಆಜ್ಞಾಪಿಸಿದನು. ಅಬ್ಷಾಲೋಮನ ಬಗ್ಗೆ ತನ್ನ ಸೇನಾಪತಿಗಳಿಗೆ ರಾಜನು ನೀಡಿದ ಆಜ್ಞೆಯು ಜನರೆಲ್ಲರಿಗೂ ಕೇಳಿಸಿತು.


ಯೋವಾಬನು, “ನಿನ್ನೊಂದಿಗೆ ನಾನಿಲ್ಲಿ ನನ್ನ ಕಾಲವನ್ನು ವ್ಯರ್ಥಮಾಡುವುದಿಲ್ಲ” ಎಂದನು. ಅಬ್ಷಾಲೋಮನು ಓಕ್ ಮರದಲ್ಲಿ ನೇತಾಡುತ್ತಾ ಇನ್ನೂ ಜೀವಂತವಾಗಿದ್ದನು. ಯೋವಾಬನು ಮೂರು ಬರ್ಜಿಗಳನ್ನು ತೆಗೆದುಕೊಂಡು ಅಬ್ಷಾಲೋಮನತ್ತ ಎಸೆದನು. ಬರ್ಜಿಗಳು ಅಬ್ಷಾಲೋಮನ ಹೃದಯವನ್ನು ಛೇದಿಸಿಕೊಂಡು ಹೋದವು.


ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.


ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.


ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.


ಅಬ್ಷಾಲೋಮನು ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ಮಾಡಿದನು. ಅಮಾಸನು ಯೋವಾಬನ ಸ್ಥಾನಕ್ಕೆ ಬಂದನು. ಅಮಾಸನು ಇಸ್ರೇಲನಾದ ಇತ್ರನ ಮಗ. ಅಮಾಸನ ತಾಯಿಯಾದ ಅಬೀಗಲಳು, ನಾಹಾಷನ ಮಗಳು ಮತ್ತು ಚೆರೂಯಳ ಸೋದರಿ.


ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.


ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.


ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು.


“ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು