1 ಅರಸುಗಳು 2:7 - ಪರಿಶುದ್ದ ಬೈಬಲ್7 “ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಆದರೆ ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡು; ಅವರು ದಿನನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಏಕೆಂದರೆ ನಾನು ನಿನ್ನ ಸಹೋದರ ಅಬ್ಷಾಲೋಮನಿಂದ ತಪ್ಪಿಸಿಕೊಂಡು ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು; ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು. ಅಧ್ಯಾಯವನ್ನು ನೋಡಿ |
ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ, ಇಪ್ಪತ್ತು ಮಂದಿ ಸೇವಕರೂ ಇದ್ದರೂ.