Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:1 - ಪರಿಶುದ್ದ ಬೈಬಲ್‌

1 ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಮಂದಿ ಅರಸರೊಡನೆ ಹೊರಟು ಬಂದು ಸಮಾರ್ಯಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:1
28 ತಿಳಿವುಗಳ ಹೋಲಿಕೆ  

ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.


ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;


ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.


ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು.


ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು.


“ದಮಸ್ಕದ ಗೋಡೆಗಳಿಗೆ ನಾನು ಬೆಂಕಿ ಹಚ್ಚುವೆನು. ಆ ಬೆಂಕಿಯು ಬೆನ್‌ಹದದನ ಭದ್ರವಾದ ಕೋಟೆಯನ್ನು ಸುಟ್ಟುಹಾಕುವುದು.”


ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.


ಅಶ್ಶೂರವು ಹೀಗೆ ಹೇಳುತ್ತದೆ: ‘ನನ್ನ ನಾಯಕರೆಲ್ಲಾ ರಾಜರಂತಿರುತ್ತಾರೆ.


ಅರಸನಾದ ಅರ್ತಷಸ್ತನಿಂದ: ಪರಲೋಕದ ದೇವರ ಕಟ್ಟಳೆಗಳ ಬೋಧಕನೂ ಯಾಜಕನೂ ಆಗಿರುವ ಎಜ್ರನಿಗೆ ವಂದನೆಗಳು.


ನೀನು ಮಾಡಬೇಕಾದದ್ದೇನೆಂದರೆ, ಮೂವತ್ತೆರಡು ಮಂದಿ ರಾಜರು ಸೇನೆಯನ್ನು ಮುನ್ನಡೆಸುವುದು ಬೇಡ; ಅವರ ಸೇನೆಯನ್ನು ಸೇನಾಧಿಪತಿಗಳೇ ಮುನ್ನಡೆಸಲಿ.


ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಹದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು.


ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು.


ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಒಟ್ಟುಗೂಡಿದರು. ಫಿಲಿಷ್ಟಿಯರಲ್ಲಿ ಮೂರು ಸಾವಿರ ರಥಗಳಿದ್ದವು; ಆರು ಸಾವಿರ ಅಶ್ವಸೈನಿಕರಿದ್ದರು. ಫಿಲಿಷ್ಟಿಯರಲ್ಲಿ ನದಿದಂಡೆಯ ಮರಳಿನ ಕಣಗಳಷ್ಟು ಯೋಧರಿದ್ದರು. ಫಿಲಿಷ್ಟಿಯರು ಬೇತಾವೆನಿನ ಪೂರ್ವ ದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.


ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.


ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


“ನೀವು ನಿಮಗಿಂತ ಬಲಿಷ್ಠರಾದ ವೈರಿಗಳ ಮೇಲೆ ಯುದ್ಧಕ್ಕೆ ಹೋದಾಗ ಅವರ ರಥಾಶ್ವಗಳನ್ನು ಮತ್ತು ನಿಮಗಿಂತಲೂ ಹೆಚ್ಚಾದ ಸೈನ್ಯಬಲವನ್ನು ನೋಡಿ ನೀವು ಭಯಗ್ರಸ್ತರಾಗಬೇಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ತಂದವನು ಆತನೇ.


ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


ಫರೋಹನು ತನ್ನ ಆರುನೂರು ರಥಗಳನ್ನೂ ಅವುಗಳ ಚಾಲಕರನ್ನೂ ಮತ್ತು ಅವುಗಳೊಡನೆ ಈಜಿಪ್ಟಿನ ಇತರ ರಥಗಳನ್ನೂ ತೆಗೆದುಕೊಂಡನು. ಪ್ರತಿಯೊಂದು ರಥದಲ್ಲಿ ಒಬ್ಬ ದಳಪತಿ ಇದ್ದನು.


ರಾಜನು ಆ ನಗರದಲ್ಲಿದ್ದ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು.


ಅರಾಮ್ಯರ ರಾಜನು ಇಸ್ರೇಲಿನ ವಿರುದ್ಧ ಯುದ್ಧಮಾಡಲು ಬಂದನು. ಅವನು ತನ್ನ ಸೇನಾಧಿಕಾರಿಗಳ ಸಭೆಸೇರಿಸಿ, “ನೀವು ಈ ಜಾಗದಲ್ಲಿ ಅಡಗಿಕೊಂಡಿದ್ದು, ಇಸ್ರೇಲರು ಇಲ್ಲಿಗೆ ಬಂದಾಗ ಅವರ ಮೇಲೆ ಆಕ್ರಮಣ ಮಾಡಿ” ಎಂದು ಹೇಳಿದನು.


ಎಲೀಷನು ಸತ್ತಬಾಲಕನಿಗೆ ಮತ್ತೆ ಜೀವವನ್ನು ಬರುವಂತೆ ಮಾಡಿದ್ದರ ಬಗ್ಗೆ ಗೇಹಜಿಯು ರಾಜನಿಗೆ ಹೇಳುತ್ತಿದ್ದನು. ಎಲೀಷನು ಮರಳಿ ಜೀವಬರಿಸಿದ ಬಾಲಕನ ತಾಯಿಯು ಆ ಸಮಯದಲ್ಲಿ ರಾಜನ ಬಳಿಗೆ ಹೋದಳು. ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಕೊಡಿಸಬೇಕೆಂದು ಕೇಳಿಕೊಳ್ಳಲು ಆಕೆ ಬಂದಿದ್ದಳು. ಗೇಹಜಿಯು, “ನನ್ನ ಒಡೆಯನೇ, ರಾಜನೇ, ಇವಳೇ ಆ ಸ್ತ್ರೀಯು! ಎಲೀಷನು ಮರಳಿ ಜೀವಬರಿಸಿದ ಬಾಲಕನು ಇವನೇ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು