Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:13 - ಪರಿಶುದ್ದ ಬೈಬಲ್‌

13 ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಒಬ್ಬ ಪ್ರವಾದಿಯು ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ - ಈ ಮಹಾ ಸಮೂಹವನ್ನು ನೋಡಿದಿಯಾ; ನಾನು ಯೆಹೋವನೇ ಎಂಬದು ನಿನಗೆ ಗೊತ್ತಾಗುವಂತೆ ಈಹೊತ್ತೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:13
22 ತಿಳಿವುಗಳ ಹೋಲಿಕೆ  

ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”


ಆದರೆ ನಾನು ನನ್ನನ್ನು ಹಾಗೆ ಮಾಡದಂತೆ ತಡೆದೆನು. ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದನ್ನು ಬೇರೆ ಜನಾಂಗದವರು ನೋಡಿರುತ್ತಾರೆ. ಆದ್ದರಿಂದ ನಾನು ಅವರನ್ನು ನಾಶಮಾಡಲಿಲ್ಲ. ನನ್ನ ಹೆಸರಿನ ಘನತೆಯನ್ನು ಉಳಿಸಿಕೊಂಡೆನು.


“ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವುದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಮುಂದೆ ಇಸ್ರೇಲನ್ನು ನಾಶಮಾಡಲಿಲ್ಲ.


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ಎಲೀಷನು ಅವನಿಗೆ, “ಯೆಹೋವನ ಸಂದೇಶವನ್ನು ಕೇಳು: ‘ನಾಳೆ ಇದೇ ಸಮಯಕ್ಕೆ, ಅಧಿಕವಾದ ಆಹಾರವು ಬಹಳ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರ ಬಾಗಿಲಿನಲ್ಲಿರುವ ಮಾರುಕಟ್ಟೆಯಲ್ಲಿ ಮಾರಲಾಗುವುದು’” ಎಂದನು.


“ನಾನು ಇಸ್ರೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತಮಕ್ಕಿಂತ ಮೊದಲು ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯಕ್ಕಿಂತ ಮೊದಲು ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’” ಎಂದು ಹೇಳಿದನು.


ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.


ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ನಾನು ಯೆಹೋವನೆಂದು ತಿಳಿಯುವಿ.’”


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.


ನಂತರ ಯೋವಾಬನು ಮತ್ತು ಅವನ ಜನರು ಅರಾಮ್ಯರ ಮೇಲೆ ಆಕ್ರಮಣ ಮಾಡಿದರು. ಯೋವಾಬ ಮತ್ತು ಅವನ ಜನರನ್ನು ಬಿಟ್ಟು ಅರಾಮ್ಯರು ಓಡಿಹೋದರು.


ಅಹಾಬನು, “ಅವರನ್ನು ಸೋಲಿಸಲು ನೀನು ಯಾರನ್ನು ಬಳಸಿಕೊಳ್ಳುವೆ?” ಎಂದನು. ಪ್ರವಾದಿಯು, “ಜಿಲ್ಲೆಗಳ ರಾಜ್ಯಪಾಲರುಗಳ ಸೇವೆಮಾಡುತ್ತಿರುವ ಯೌವನಸ್ಥರನ್ನು ಬಳಸಿಕೊಳ್ಳುತ್ತೇನೆ ಎಂದು ಯೆಹೋವನು ಹೇಳುತ್ತಾನೆ” ಎಂದು ಉತ್ತರಿಸಿದನು. ನಂತರ ರಾಜನು, “ಯುದ್ಧವನ್ನು ಆರಂಭಿಸುವವರು ಯಾರು?” ಎಂದು ಕೇಳಿದನು. “ನೀನೇ” ಎಂದು ಪ್ರವಾದಿಯು ಉತ್ತರಿಸಿದನು.


ಆಗ ಆ ಪ್ರವಾದಿಯು ರಾಜನಾದ ಅಹಾಬನಲ್ಲಿಗೆ ಹೋಗಿ, “ಅರಾಮಿನ ರಾಜನಾದ ಬೆನ್ಹದದನು ಮುಂದಿನ ವಸಂತಮಾಸದಲ್ಲಿ ನಿನ್ನ ವಿರುದ್ಧ ಯುದ್ಧಮಾಡಲು ಮತ್ತೆ ಬರುತ್ತಾನೆ. ಈಗ ನೀನು ಮನೆಗೆ ಹೋಗಿ ನಿನ್ನ ಸೈನ್ಯವನ್ನು ಬಲಪಡಿಸು. ಅವನ ವಿರುದ್ಧ ನೀನು ಸಮರ್ಥನಾಗಲು ಎಚ್ಚರಿಕೆಯಿಂದ ಉಪಾಯಗಳನ್ನು ಮಾಡು” ಎಂದು ಹೇಳಿದನು.


ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.


ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ಯೆಹೋವನಿಗೆ ಇದು ಸುಲಭ ಸಾಧ್ಯ. ಮೋವಾಬ್ಯರನ್ನು ನೀವು ಸೋಲಿಸುವಂತೆ ಆತನೇ ಅವಕಾಶ ಮಾಡುತ್ತಾನೆ.


ಸಭೆಯ ಮಧ್ಯದಲ್ಲಿ ನಿಂತುಕೊಂಡು ಯೆಹಜೀಯೇಲನು ಅವರಿಗೆ, “ರಾಜನಾದ ಯೆಹೋಷಾಫಾಟನೇ, ನನ್ನ ಮಾತನ್ನು ಕೇಳು. ಜೆರುಸಲೇಮಿನಲ್ಲಿಯೂ ಯೆಹೂದದ ರಾಜ್ಯದಲ್ಲಿಯೂ ವಾಸಿಸುವ ಸರ್ವಜನರೇ, ನನ್ನ ಮಾತನ್ನು ಕೇಳಿರಿ. ಯೆಹೋವನು ನಿಮಗೆ ಹೀಗೆನ್ನುತ್ತಾನೆ: ‘ಆ ದೊಡ್ಡ ಸೈನ್ಯಕ್ಕೆ ಹೆದರಿ ಚಿಂತೆಗೊಳಗಾಗಬೇಡಿ. ಯಾಕೆಂದರೆ ಯುದ್ಧವು ನಿಮ್ಮದಲ್ಲ, ಅದು ದೇವರದೇ!


ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು