1 ಅರಸುಗಳು 20:16 - ಪರಿಶುದ್ದ ಬೈಬಲ್16 ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಹದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮಧ್ಯಾಹ್ನದಲ್ಲಿ, ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ರಾಜರ ಸಂಗಡ ಮದ್ಯಪಾನಮಾಡಿ ಮತ್ತನಾಗಿ, ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ಅರಸರ ಸಂಗಡ ಮದ್ಯಪಾನಮಾಡಿ ಮತ್ತನಾಗಿ ಡೇರೆಯಲ್ಲಿ ಕೂತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿ |
ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.