Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:17 - ಪರಿಶುದ್ದ ಬೈಬಲ್‌

17 ಮೊದಲು ಯುವಸಹಾಯಕರು ಆಕ್ರಮಣ ಮಾಡಿದರು. ರಾಜನಾದ ಬೆನ್ಹದದನ ಜನರು, ಸಮಾರ್ಯದಿಂದ ಸೈನಿಕರು ಹೊರಗೆ ಬಂದಿದ್ದಾರೆಂಬುದನ್ನು ಅವನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು, “ಸಮಾರಿಯದ ಜನರು ಹೊರಗೆ ಬಂದಿರುತ್ತಾರೆ” ಎಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು. ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಲು ಅವನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳ ಮೊದಲು ಸೈನ್ಯವಾಗಿ ಬಂದರು. ಬೆನ್ಹದದನು ಪತ್ತೆದಾರರನ್ನು ಕಳುಹಿಸಿದನು. “ಅವರು ತಿರುಗಿಬಂದು ಸಮಾರ್ಯದಿಂದ ಸೈನಿಕರು ಬಂದಿದ್ದಾರೆ,” ಎಂದು ಅವನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:17
5 ತಿಳಿವುಗಳ ಹೋಲಿಕೆ  

ಜಿಲ್ಲೆಗಳ ರಾಜ್ಯಪಾಲರುಗಳ ಸೇವೆಮಾಡುತ್ತಿದ್ದ ಯುವಕರು ಆಕ್ರಮಣದ ಮಂಚೂಣಿಯಲ್ಲಿದ್ದು, ಇಸ್ರೇಲಿನ ಸೇನೆಯು ಅವರನ್ನು ಹಿಂಬಾಲಿಸುತ್ತಿತ್ತು.


ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.


ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಹದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು.


ಬೆನ್ಹದದನು, “ಅವರು ಪ್ರಾಯಶಃ ಹೋರಾಡಲು ಬಂದಿರಬಹುದು ಅಥವಾ ಅವರು ಶಾಂತಿ ಸಂಧಾನಕ್ಕಾಗಿ ಬಂದಿರಬಹುದು. ಅವರು ಯಾವುದಕ್ಕಾಗಿ ಬಂದಿದ್ದರೂ ಅವರನ್ನು ಜೀವಸಹಿತ ಬಂಧಿಸಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು