1 ಅರಸುಗಳು 20:20 - ಪರಿಶುದ್ದ ಬೈಬಲ್20 ಆದರೆ ಇಸ್ರೇಲಿನ ಪ್ರತಿಯೊಬ್ಬನೂ ತನ್ನ ಮೇಲೆ ಬಿದ್ದವನನ್ನು ಕೊಂದುಹಾಕುತ್ತಿದ್ದನು. ಅರಾಮ್ಯದ ಜನರು ಓಡಿಹೋಗಲು ಆರಂಭಿಸಿದರು. ಇಸ್ರೇಲಿನ ಸೈನ್ಯವು ಅವರನ್ನು ಅಟ್ಟಿಸಿಕೊಂಡು ಹೋಯಿತು. ರಾಜನಾದ ಬೆನ್ಹದದನು ಅಶ್ವಸೇನೆಯ ಕುದುರೆಯೊಂದರ ಮೇಲೆ ಕುಳಿತು ತಪ್ಪಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದೆ ನಡೆದನು; ಸಿರಿಯಾದವರು ಓಡಿಹೋಗತೊಡಗಿದರು. ಇಸ್ರಯೇಲರು ಅವರನ್ನು ಹಿಂದಟ್ಟಿದರು. ಅರಸ ಬೆನ್ಹದದನು ಹಾಗು ಕೆಲವು ಮಂದಿ ರಾಹುತರು ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದರಿದನು; ಅರಾಮ್ಯರು ಓಡಿಹೋಗಲು ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಕೆಲವು ಮಂದಿ ರಾಹುತರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪ್ರತಿ ಸೈನಿಕನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದರು. ಆಗ ಅರಾಮ್ಯರು ಓಡಿಹೋದರು. ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು. ಅಧ್ಯಾಯವನ್ನು ನೋಡಿ |