1 ಅರಸುಗಳು 20:22 - ಪರಿಶುದ್ದ ಬೈಬಲ್22 ಆಗ ಆ ಪ್ರವಾದಿಯು ರಾಜನಾದ ಅಹಾಬನಲ್ಲಿಗೆ ಹೋಗಿ, “ಅರಾಮಿನ ರಾಜನಾದ ಬೆನ್ಹದದನು ಮುಂದಿನ ವಸಂತಮಾಸದಲ್ಲಿ ನಿನ್ನ ವಿರುದ್ಧ ಯುದ್ಧಮಾಡಲು ಮತ್ತೆ ಬರುತ್ತಾನೆ. ಈಗ ನೀನು ಮನೆಗೆ ಹೋಗಿ ನಿನ್ನ ಸೈನ್ಯವನ್ನು ಬಲಪಡಿಸು. ಅವನ ವಿರುದ್ಧ ನೀನು ಸಮರ್ಥನಾಗಲು ಎಚ್ಚರಿಕೆಯಿಂದ ಉಪಾಯಗಳನ್ನು ಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಆ ಪ್ರವಾದಿ ಮತ್ತೆ ಇಸ್ರಯೇಲರ ಅರಸನ ಬಳಿಗೆ ಬಂದನು. “ಸಿರಿಯಾದವರ ಅರಸನು ಮುಂದಿನ ವರ್ಷ ಇನ್ನೊಮ್ಮೆ ನಿನ್ನ ಮೇಲೆ ದಾಳಿಮಾಡಬರುವನು; ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಪರ್ಯಾಲೋಚಿಸು,” ಎಂದು ಎಚ್ಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಪ್ರವಾದಿಯು ತಿರಿಗಿ ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಅರಾಮ್ಯರ ಅರಸನು ಮುಂದಿನ ವರುಷದಲ್ಲಿ ಇನ್ನೊಮ್ಮೆ ನಿನಗೆ ವಿರೋಧವಾಗಿ ಬರುತ್ತಾನೆ; ಆದದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬದನ್ನು ಪರ್ಯಾಲೋಚಿಸು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು. ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.