Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:24 - ಪರಿಶುದ್ದ ಬೈಬಲ್‌

24 ನೀನು ಮಾಡಬೇಕಾದದ್ದೇನೆಂದರೆ, ಮೂವತ್ತೆರಡು ಮಂದಿ ರಾಜರು ಸೇನೆಯನ್ನು ಮುನ್ನಡೆಸುವುದು ಬೇಡ; ಅವರ ಸೇನೆಯನ್ನು ಸೇನಾಧಿಪತಿಗಳೇ ಮುನ್ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ಆಯಾ ಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀವು ಆಯಾ ಸ್ಥಳಗಳಲ್ಲಿರುವ ರಾಜರನ್ನು ತೆಗೆದುಹಾಕಿ, ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ಆಯಾಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇವಿುಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ನೀನು ಮಾಡಬೇಕಾದದ್ದೇನೆಂದರೆ, ಅರಸರನ್ನು ತೆಗೆದುಹಾಕಿ ಅವರಿಗೆ ಪ್ರತಿಯಾಗಿ ಅಧಿಪತಿಗಳನ್ನು ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:24
6 ತಿಳಿವುಗಳ ಹೋಲಿಕೆ  

ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;


ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಹದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು.


ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.


ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ.


ಹಿಂದೆ ನೀನು ಕಳೆದುಕೊಂಡ ಸೇನೆಯಂತಹ ಮತ್ತೊಂದು ಸೈನ್ಯವನ್ನೀಗ ನೀನು ಒಟ್ಟುಗೂಡಿಸು, ಆ ಸೇನೆಯಲ್ಲಿದ್ದಂತಹ ಕುದುರೆಗಳನ್ನೂ ರಥಗಳನ್ನೂ ಒಟ್ಟಾಗಿ ಸೇರಿಸು. ನಂತರ ಇಸ್ರೇಲರೊಡನೆ ಸಮತಟ್ಟಾದ ಪ್ರದೇಶದಲ್ಲಿ ನಾವು ಹೋರಾಟ ಮಾಡೋಣ. ಆಗ ನಾವು ಜಯಗಳಿಸುತ್ತೇವೆ” ಎಂದು ಹೇಳಿದರು. ಬೆನ್ಹದದನು ಅವರ ಸಲಹೆಯನ್ನು ಅನುಸರಿಸಿ ಅವರು ಹೇಳಿದಂತೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು