Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:28 - ಪರಿಶುದ್ದ ಬೈಬಲ್‌

28 ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಯೆಹೋವನು ಹೀಗನ್ನುತ್ತಾನೆ - ಯೆಹೋವನು ತಗ್ಗುಗಳ ದೇವರಲ್ಲ, ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:28
32 ತಿಳಿವುಗಳ ಹೋಲಿಕೆ  

ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’” ಎಂದು ಹೇಳಿದನು.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


“ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ಅನ್ಯ ಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.


ನನ್ನ ಜನರಾದ ಇಸ್ರೇಲರಲ್ಲಿ ನನ್ನ ಪವಿತ್ರನಾಮವನ್ನು ಪ್ರಸಿದ್ಧಿಪಡಿಸುವೆನು. ಅವರು ನನ್ನ ಪವಿತ್ರ ನಾಮವನ್ನು ಇನ್ನು ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀವು ಇದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಈ ಕಾರ್ಯಗಳನ್ನು ನಿಮಗಾಗಿ ಮಾಡದೆ ನನ್ನ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನಪಡುವವರಾಗಿರಬೇಕು.”


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವುದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಮುಂದೆ ಇಸ್ರೇಲನ್ನು ನಾಶಮಾಡಲಿಲ್ಲ.


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಇಸ್ರೇಲರು ವಾಸವಾಗಿರುವ ಸ್ಥಳದಲ್ಲಿ ಜನರ ಮುಂದೆ ನನ್ನ ಹೆಸರನ್ನು ಅವಮಾನಕ್ಕೆ ಗುರಿಮಾಡಲು ನನಗೆ ಇಷ್ಟವಿರಲಿಲ್ಲ. ಈಜಿಪ್ಟಿನಿಂದ ಹೊರಗೆ ತರುತ್ತೇನೆಂಬ ವಾಗ್ದಾನದೊಡನೆ ನಾನು ಇಸ್ರೇಲರಿಗೆ ಪ್ರಕಟಿಸಿಕೊಂಡಿದ್ದನ್ನು ಅವರು ನೋಡಿದ್ದರು. ಆದ್ದರಿಂದ ನಾನು ಇಸ್ರೇಲರನ್ನು ಅವರ ಮುಂದೆ ನಾಶಮಾಡಲಿಲ್ಲ.


ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಞೆಗೆ ನೀವು ಅವಿಧೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”


ನಾನು ಅವರ ಮೇಲೆ ನನ್ನ ಕೈಯೆತ್ತಿ ಅವರನ್ನು ದಂಡಿಸುವೆನು ಮತ್ತು ಮರುಭೂಮಿಯಿಂದ ದಿಬ್ಲದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಬುದು ಅವರಿಗೆ ತಿಳಿಯುವುದು.”


“ಯೆಹೋವನೇ, ಅದು ನಮ್ಮ ಪಾಪಗಳ ಫಲವೆಂಬುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನ್ನನ್ನು ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನ್ನ ವಿರುದ್ಧ ಪಾಪಮಾಡಿದ್ದೇವೆ.


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.”’


ನಿಮ್ಮಲ್ಲಿ ಆಹಾರವಿರಲಿಲ್ಲ; ಕುಡಿಯಲು ದ್ರಾಕ್ಷಾರಸವಾಗಲಿ ಪಾನೀಯವಾಗಲಿ ಇರಲಿಲ್ಲ. ಆದರೆ ಯೆಹೋವನು ಮನ್ನವನ್ನು ಮತ್ತು ನೀರನ್ನು ಕೊಟ್ಟನು. ಆತನೇ ನಿಮ್ಮ ದೇವರಾದ ಯೆಹೋವನೆಂದು ನೀವು ಅರಿತುಕೊಳ್ಳುವ ಹಾಗೆ ಮಾಡಿದನು.


ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ.


ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”


ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


“ನಾನು ಇಸ್ರೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತಮಕ್ಕಿಂತ ಮೊದಲು ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯಕ್ಕಿಂತ ಮೊದಲು ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’” ಎಂದು ಹೇಳಿದನು.


ಈ ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು.


ಬೇರೆ ಯಾವ ದೇಶದ ದೇವರುಗಳು ನನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಿ ಕಾಪಾಡಿದರು? ಹೀಗಿರಲು ಯೆಹೋವನು ಜೆರುಸಲೇಮನ್ನು ನನ್ನಿಂದ ರಕ್ಷಿಸುವನೋ? ಇಲ್ಲ.’”


ನಂತರ ಯೋವಾಬನು ಮತ್ತು ಅವನ ಜನರು ಅರಾಮ್ಯರ ಮೇಲೆ ಆಕ್ರಮಣ ಮಾಡಿದರು. ಯೋವಾಬ ಮತ್ತು ಅವನ ಜನರನ್ನು ಬಿಟ್ಟು ಅರಾಮ್ಯರು ಓಡಿಹೋದರು.


ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.


ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯೆಹೋವನೇ, ನೀನು ದೇವರೆಂಬುದನ್ನು ಈ ಜನರಿಗೆಲ್ಲ ತೋರಿಸು. ಈ ಜನರನ್ನೆಲ್ಲ ಮತ್ತೆ ನೀನು ನಿನ್ನ ಬಳಿಗೆ ತರುತ್ತಿರುವೆ ಎಂಬುದನ್ನೂ ಈ ಜನರು ತಿಳಿದುಕೊಳ್ಳಲಿ” ಎಂದು ಪ್ರಾರ್ಥಿಸಿದನು.


ಲೋಕದ ಜನರು ಆರಾಧಿಸಿದ ಮತ್ತು ಕೈಯಾರೆ ಮಾಡಿದ್ದ ದೇವರುಗಳನ್ನು ಜೆರುಸಲೇಮಿನ ದೇವರೊಂದಿಗೆ ಹೋಲಿಸಿ ಆತನ ವಿರುದ್ಧವಾಗಿ ಮಾತಾಡಿದರು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು