Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:3 - ಪರಿಶುದ್ದ ಬೈಬಲ್‌

3 ಅವನ ಸಂದೇಶವು ಹೀಗಿತ್ತು: “ಬೆನ್ಹದದನು ಹೀಗೆನ್ನುವನು, ‘ನೀವು ನನಗೆ ನಿಮ್ಮಲ್ಲಿರುವ ಬೆಳ್ಳಿಬಂಗಾರಗಳನ್ನು ಒಪ್ಪಿಸಬೇಕು. ನಿಮ್ಮ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಿನ್ನ ಬೆಳ್ಳಿಬಂಗಾರ ನನ್ನದು. ನಿನ್ನ ಪ್ರಿಯ ಹೆಂಡತಿ ಮಕ್ಕಳು ನನ್ನವರೇ ಎಂದು ತಿಳಿದುಕೋ” ಎಂಬುದಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಿನ್ನ ಬೆಳ್ಳಿಬಂಗಾರವು ನನ್ನದು; ನಿನ್ನ ಪ್ರಿಯ ಸತಿಸುತರರೂ ನನ್ನವರೇ ಎಂದು ತಿಳಿದುಕೋ,” ಎಂಬುದಾಗಿ ಆ ದೂತರಿಂದ ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಬೆಳ್ಳಿಬಂಗಾರವು ನನ್ನದು; ನಿನ್ನ ಪ್ರಿಯ ಸತಿಸುತರೂ ನನ್ನವರೇ ಎಂದು ತಿಳಿದುಕೋ ಎಂಬದಾಗಿ ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ನಿನ್ನ ಬೆಳ್ಳಿಯೂ, ನಿನ್ನ ಬಂಗಾರವೂ ನನ್ನವು. ನಿನ್ನ ಪತ್ನಿಯರೂ, ನಿನ್ನ ಮಕ್ಕಳೆಲ್ಲರೂ ನನ್ನವರು,’ ” ಎಂಬುದಾಗಿ ಅವನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:3
5 ತಿಳಿವುಗಳ ಹೋಲಿಕೆ  

“‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.


ರಾಜನು ಆ ನಗರದಲ್ಲಿದ್ದ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು.


ಇಸ್ರೇಲಿನ ರಾಜನು, “ನನ್ನ ಒಡೆಯನಾದ ರಾಜನೇ, ಈಗ ನಾನು ನಿನ್ನವನೇ. ನನ್ನ ಬಳಿ ಇರುವುದೆಲ್ಲವೂ ನಿನ್ನದೇ” ಎಂದು ಉತ್ತರಿಸಿದನು.


ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡು, ತಲೆಯ ಮೇಲೆ ಹಗ್ಗವನ್ನು ಹಾಕಿಕೊಂಡು, ಇಸ್ರೇಲಿನ ರಾಜನ ಬಳಿಗೆ ಬಂದರು. ಅವರು, “ನಿಮ್ಮ ಸೇವಕನಾದ ಬೆನ್ಹದದನು ಹೀಗೆನ್ನುವನು: ‘ದಯವಿಟ್ಟು ನನ್ನನ್ನು ಜೀವಸಹಿತ ಬಿಡು’” ಎಂದರು. ಅಹಾಬನು, “ಅವನಿನ್ನೂ ಜೀವಸಹಿತ ಇದ್ದಾನೆಯೇ? ಅವನು ನನ್ನ ಸೋದರ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು