1 ಅರಸುಗಳು 20:31 - ಪರಿಶುದ್ದ ಬೈಬಲ್31 ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಳಿಗೆ) ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಗ ಅವನ ಅಧಿಕಾರಿಗಳು, “ಇಸ್ರಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದುದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಆ ಅರಸನ ಬಳಿಗೆ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡಿದರೆ ಅವನು ತಮ್ಮ ಜೀವವನ್ನು ಉಳಿಸಬಹುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆಗ ಅವನ ಸೇವಕರು ಅವನಿಗೆ - ಇಸ್ರಾಯೇಲ್ಯರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿಗೆ ಹೋಗುವದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡುವದಾದರೆ ಅವನು ನಿನ್ನ ಜೀವವನ್ನು ಉಳಿಸಾನು ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.