1 ಅರಸುಗಳು 20:33 - ಪರಿಶುದ್ದ ಬೈಬಲ್33 ರಾಜನಾದ ಅಹಾಬನು ತಾನು ಬೆನ್ಹದದನನ್ನು ಕೊಲ್ಲುವುದಿಲ್ಲವೆಂಬುದನ್ನು ಯಾವುದಾದರೂ ಸೂಚನೆಯ ಮೂಲಕ ತಿಳಿಸಬಹುದೆಂದು ಬೆನ್ಹದದನ ಜನರು ಅಪೇಕ್ಷೆಪಟ್ಟಿದ್ದರು. ಅಹಾಬನು ಬೆನ್ಹದದನನ್ನು ತನ್ನ ಸೋದರನೆಂದು ಕರೆದಾಗ, ಸಲಹೆಗಾರರು ತ್ವರಿತವಾಗಿ, “ಹೌದು! ಬೆನ್ಹದದನು ನಿನ್ನ ಸೋದರನೇ” ಎಂದರು. ಅಹಾಬನು, “ಅವನನ್ನು ನನ್ನ ಬಳಿಗೆ ಕರೆತನ್ನಿ” ಎಂದನು. ಬೆನ್ಹದದನು ರಾಜನಾದ ಅಹಾಬನ ಬಳಿಗೆ ಬಂದನು. ರಾಜನಾದ ಅಹಾಬನು ಅವನನ್ನು ತನ್ನೊಡನೆ ರಥದಲ್ಲಿ ಕುಳ್ಳಿರಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, “ಬೆನ್ಹದದನು ನಿನ್ನ ಸಹೋದರನೇ ಹೌದು” ಅಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವರು ಈ ಮಾತು ಶುಭವಚನವೆಂದು ನೆನೆಸಿ, ಕೂಡಲೆ ಅವನ ಮಾತನ್ನೇ ಅನುಮೋದಿಸಿ, “ಬೆನ್ಹದದನು ನಿಮ್ಮ ಸಹೋದರನೇ ಹೌದು,” ಎಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು. ಅವನು ಬಂದಾಗ ಅವನನ್ನು ತನ್ನ ರಥದಲ್ಲೇ ಕುಳ್ಳಿರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು - ಬೆನ್ಹದದನು ನಿನ್ನ ಸಹೋದರನೇ ಹೌದು ಅಂದರು. ಅವನು ಅವರಿಗೆ - ಹೋಗಿ ಬೆನ್ಹದದನನ್ನು ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೆ ಆ ಮನುಷ್ಯರು ಈ ಮಾತನ್ನು ಶುಭಸೂಚನೆಯಾಗಿ ನೆನಸಿ, ಅವನ ಮಾತಿಗೆ ಉತ್ತರವಾಗಿ, “ನಿನ್ನ ಸಹೋದರನಾದ ಬೆನ್ಹದದನು ಇದ್ದಾನೆ,” ಎಂದು ಹೇಳಿದರು. ಆಗ ಅಹಾಬನು, “ನೀವು ಹೋಗಿ ಅವನನ್ನು ಕರೆದುಕೊಂಡು ಬನ್ನಿರಿ,” ಎಂದನು. ಬೆನ್ಹದದನು ಅವನ ಬಳಿಗೆ ಹೊರಟುಬಂದಾಗ ಅಹಾಬನು ಅವನನ್ನು ರಥದಲ್ಲಿ ಕುಳ್ಳಿರಿಸಿಕೊಂಡನು. ಅಧ್ಯಾಯವನ್ನು ನೋಡಿ |
ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದಾಬನನ್ನು ಸಂಧಿಸಿದನು. ಯೆಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ಥನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದಾಬನನ್ನು ರಥದೊಳಕ್ಕೆ ಎಳೆದುಕೊಂಡನು.
ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.