1 ಅರಸುಗಳು 20:35 - ಪರಿಶುದ್ದ ಬೈಬಲ್35 ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು. ಅಧ್ಯಾಯವನ್ನು ನೋಡಿ |
ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.