1 ಅರಸುಗಳು 20:40 - ಪರಿಶುದ್ದ ಬೈಬಲ್40 ಆದರೆ ನಾನು ಇತರ ಕೆಲಸಗಳಲ್ಲಿ ನಿರತನಾಗಿದ್ದಾಗ, ಆ ಮನುಷ್ಯನು ಓಡಿಹೋದನು” ಎಂದು ಹೇಳಿದನು. ಇಸ್ರೇಲಿನ ರಾಜನು, “ಆ ಸೈನಿಕನು ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟ ನೀನು ನಿನ್ನನ್ನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವೆ. ಆದ್ದರಿಂದ, ಅದರ ಪರಿಹಾರವೂ ನಿನಗೆ ತಿಳಿದಿದೆ. ಆ ಮನುಷ್ಯನೇನು ಹೇಳಿದನೊ ಅದನ್ನು ನೀನು ಮಾಡಲೇಬೇಕು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು” ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ “ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ನಾನು ಬೇರೆ ಕೆಲಸದಲ್ಲಿದ್ದಾಗ ಆ ವ್ಯಕ್ತಿ ತಪ್ಪಿಸಿಕೊಂಡು ಹೋದನು,” ಎಂದು ಮೊರೆಯಿಟ್ಟನು. ಇಸ್ರಯೇಲರ ಅರಸನು ಇವನಿಗೆ, “ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೇ?’ ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು ಎಂದು ಮೊರೆಯಿಟ್ಟನು. ಇಸ್ರಾಯೇಲ್ಯರ ಅರಸನು ಇವನಿಗೆ - ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೋ ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದರೆ ನಿನ್ನ ಸೇವಕನು ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ತಪ್ಪಿಸಿಕೊಂಡುಹೋದನು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ನಿನ್ನ ತೀರ್ಪಿನ ಹಾಗೆಯೇ ಆಗಲಿ, ನೀನು ಸರಿಯಾಗಿ ನಿರ್ಣಯಿಸಿದಿ,” ಎಂದನು. ಅಧ್ಯಾಯವನ್ನು ನೋಡಿ |
ರಾಜನು ಅಲ್ಲಿಗೆ ಬಂದಾಗ, ಪ್ರವಾದಿಯು ಅವನಿಗೆ, “ನಾನು ಯುದ್ಧದಲ್ಲಿ ಹೋರಾಡುವುದಕ್ಕೆ ಹೋಗಿದ್ದೆನು. ನಿನ್ನವನಾದ ಒಬ್ಬ ಮನುಷ್ಯನು ಶತ್ರುವಿನ ಸೈನಿಕನೊಬ್ಬನನ್ನು ನನ್ನ ಬಳಿಗೆ ಕರೆದುಕೊಂಡು ಬಂದು, ‘ಈ ಮನುಷ್ಯನನ್ನು ರಕ್ಷಿಸು. ಇವನು ಓಡಿಹೋದರೆ, ಇವನ ಜೀವಕ್ಕೆ ಬದಲಾಗಿ ನಿನ್ನ ಜೀವವನ್ನು ಕೊಡಬೇಕಾಗುವುದು ಅಥವಾ ಬೆಳ್ಳಿಯ ಮೂವತ್ನಾಲ್ಕು ಕಿಲೋಗ್ರಾಂ ದಂಡ ಕೊಡಬೇಕಾಗುವುದು’ ಎಂದನು.