Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:41 - ಪರಿಶುದ್ದ ಬೈಬಲ್‌

41 ಆಗ ಆ ಪ್ರವಾದಿಯು ತನ್ನ ಕಣ್ಣುಗಳ ಮೇಲಿನ ಬಟ್ಟೆಯನ್ನು ಸರಿಸಿದ್ದರಿಂದ ಅವನು ಪ್ರವಾದಿಗಳಲ್ಲಿ ಒಬ್ಬನೆಂಬುದು ಇಸ್ರೇಲಿನ ರಾಜನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಕೂಡಲೆ ಆ ಪ್ರವಾದಿ ಕಣ್ಣುಗಳ ಮೇಲಿನಿಂದ ರುಮಾಲನ್ನು ತೆಗೆದನು. ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಯೇಲರ ಅರಸನಿಗೆ ಗೊತ್ತು ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಕೂಡಲೇ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲ್ಯರ ಅರಸನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಮುಂಡಾಸವನ್ನು ತೆಗೆದು ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:41
6 ತಿಳಿವುಗಳ ಹೋಲಿಕೆ  

ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.


ಪ್ರವಾದಿಯು ತನ್ನ ಕಣ್ಣಿನ ಮೇಲೆ ಬಟ್ಟೆಯನ್ನು ಕಟ್ಟಿಕೊಂಡನು. ತನ್ನನ್ನು ಯಾರೂ ಗುರುತಿಸಬಾರದೆಂದು ಅವನು ಹೀಗೆ ಕಟ್ಟಿಕೊಂಡನು. ಬಳಿಕ ಆ ಪ್ರವಾದಿಯು ಹೋಗಿ, ರಾಜನಿಗಾಗಿ ರಸ್ತೆಯಂಚಿನಲ್ಲಿ ಕಾಯುತ್ತಿದ್ದನು.


ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.


ಆದರೆ ನಾನು ಇತರ ಕೆಲಸಗಳಲ್ಲಿ ನಿರತನಾಗಿದ್ದಾಗ, ಆ ಮನುಷ್ಯನು ಓಡಿಹೋದನು” ಎಂದು ಹೇಳಿದನು. ಇಸ್ರೇಲಿನ ರಾಜನು, “ಆ ಸೈನಿಕನು ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟ ನೀನು ನಿನ್ನನ್ನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವೆ. ಆದ್ದರಿಂದ, ಅದರ ಪರಿಹಾರವೂ ನಿನಗೆ ತಿಳಿದಿದೆ. ಆ ಮನುಷ್ಯನೇನು ಹೇಳಿದನೊ ಅದನ್ನು ನೀನು ಮಾಡಲೇಬೇಕು” ಎಂದು ಉತ್ತರಿಸಿದನು.


ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಹೀಗೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು